HomeLatest NewsBIG NEWS: ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಸಮಯವೇ ಉತ್ತರ ನೀಡುತ್ತದೆ ಎಂದ ಡಿಸಿಎಂ...

BIG NEWS: ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಸಮಯವೇ ಉತ್ತರ ನೀಡುತ್ತದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು: ನಾನು ಮುಖ್ಯಮಂತ್ರಿಯಾಗಬೇಕು ಎಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೆ ಮಾಧ್ಯಮದವರಿಗೂ ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ಆಗಬೇಕು ಎಂಬ ಆಸೆ ಎಲ್ಲರಿಗೂ ಇದೆ. ನಾನು ಸಿಎಂ ಆಗಬೇಕು ಎಂಬ ಕನಸು ಜನರಿಗೆ, ಶಾಸಕರಿಗೆ ಎಲ್ಲರಿಗೂ ಇದೆ. ಆದರೆ ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು ಎಂದರು.

ರಾಜ್ಯ ಬಜೆಟ್ ಬಳಿಕ ಅಧಿಕಾರ ಹಂಚಿಕೆಯಾಗಲಿದೆ ಎಂಬ ಚರ್ಚೆ ನಡೆದಿತ್ತು ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಸಮಯವೇ ಉತ್ತರ ನೀಡಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮೆಟ್ರೋ ಪ್ರಯಾಣ ದರ ಹೆಚ್ಚಳದ ವಿಚಾರವಾಗಿ, ಮೆಟ್ರೋ ದರದ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಮೆಟ್ರೋ ದರದ ವಿಚಾರವಾಗಿ ನಾನು ಬೆಂಗಳೂರಿಗೆ ಮರಳಿದ ಬಳಿಕ ಈ ಬಗ್ಗೆ ಚರ್ಚೆ ಮಾಡುವೆ. ಜನರಿಗೆ ತೊಂದರೆ ನೀಡಲು ನಮಗೆ ಇಷ್ಟವಿಲ್ಲ. ಆರ್ಥಿಕ ಸ್ಥಿತಿಗತಿ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular