ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆಬ್ರವರಿ 12ರಂದು ನಡೆಯುವ ಸಾರ್ವತ್ರಿಕ ಮುಷ್ಕರದಲ್ಲಿ ಅಂಗನವಾಡಿ ಫೆಡರೇಷನ್ ಭಾಗವಹಿಸಲಿದೆ.
ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಈ ಬಗ್ಗೆ ಮಾಹಿತಿ ನೀಡಿದೆ. ಫೆಡರೇಷನ್ ರಾಜ್ಯ ಕಾರ್ಯದರ್ಶಿ ಎಂ. ಜಯಮ್ಮ ಈ ಬಗ್ಗೆ ಹೇಳಿಕೆ ನೀಡಿದ್ದು, ಕಾರ್ಮಿಕ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ. 12ರಂದು ದೇಶವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅಂಗನವಾಡಿ ಉದ್ಯೋಗಿಗಳ ಬೇಡಿಕೆ ಕಡೆಗಣಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ನೀಡಲಾಗಿದೆ ಎಂದು ತಿಳಿಸಿದ್ದಾರೆ.

