HomeKarnatakaBREAKING: ಲಗ್ನಪತ್ರಿಕೆ, ಹೊಸ ಸೀರೆ ತೋರಿಸಿ ಕೈಕೊಟ್ಟ ಪ್ರೀತಿಸಿದ ಯುವತಿ, ಬಾಡಿ ಬಿಲ್ಡರ್ ಆತ್ಮಹತ್ಯೆ

BREAKING: ಲಗ್ನಪತ್ರಿಕೆ, ಹೊಸ ಸೀರೆ ತೋರಿಸಿ ಕೈಕೊಟ್ಟ ಪ್ರೀತಿಸಿದ ಯುವತಿ, ಬಾಡಿ ಬಿಲ್ಡರ್ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟಿದ್ದಕ್ಕೆ ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಡಿ ಬಿಲ್ಡರ್ ಕಿರಣ್(26) ಆತ್ಮಹತ್ಯೆ ಮಾಡಿಕೊಂಡವರು.

ಮೂರು ವರ್ಷಗಳಿಂದ ಯುವತಿಯನ್ನು ಕಿರಣ್ ಪ್ರೀತಿಸುತಿದ್ದ. ವ್ಯಾಲೆಂಟೆನ್ಸ್ ಡೇ ದಿನ ಗಿಫ್ಟ್ ಕೊಡಲು ಕಿರಣ್ ಪ್ಲಾನ್ ಮಾಡಿಕೊಂಡಿದ್ದ. ಆದರೆ ಕಿರಣ್ ಬಿಟ್ಟು ಬೇರೆ ಯುವಕನೊಂದಿಗೆ ಯುವತಿ ಮದುವೆ ಫಿಕ್ಸ್ ಆಗಿದೆ. ಲಗ್ನಪತ್ರಿಕೆ ಮತ್ತು ಹೊಸ ಸೀರೆಯನ್ನು ಯುವತಿ ತೋರಿಸಿದ್ದಾರೆ. ಇದರಿಂದ ಮನನೊಂದು ಕಿರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಲ್ಲಿರುವ ಮನೆಗೆ ಬಂದ ಕಿರಣ್ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಲವು ವರ್ಷಗಳಿಂದ ಜಿಮ್ ಟ್ರೈನರ್, ಬಾಡಿ ಬಿಲ್ಡಿಂಗ್ ಮಾಡಿಕೊಂಡಿದ್ದ ಕಿರಣ್ ಪ್ರೀತಿಸಿದ ಯುವತಿಗೆ ಮದುವೆ ನಿಶ್ಚಯವಾಗಿದ್ದನ್ನು ತಿಳಿದು ಆಕೆ ಕೈಕೊಟ್ಟಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular