ಮಡಿಕೇರಿ: ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ.
ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಆನೆಕಾಡು ಸಮೀಪ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಆನೆಕಾಡು ಬಳಿ ಮಜಿದ್ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕಾರ್ ನಿಂದ ಇಳಿದು ಅಬ್ದುಲ್ ಮಜಿದ್ ಮತ್ತು ಚಾಲಕ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕುಶಾಲನಗರ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

