ಮಂಗಳೂರು: ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಪತ್ನಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಶರಣ್ ರೈ (29) ಬಂಧಿತ ಆರೋಪಿ. ಶಾಸಕ ವೇದವ್ಯಾಸ್ ಕಾಮತ್ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ. ಈ ಬಗ್ಗೆ ಮಹಿಳೆಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಶರಣ್ ರೈನನ್ನು ಬಂಧಿಸಲಾಗಿದೆ.
ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಾಗೂ ಬಿಇಜೆಪಿ ಶಾಸಕರ ನಡುವೆ ವಾಗ್ವಾದ ನಡೆದಿತ್ತು. ಮಾತಿನ ಚಕಮಕಿಗೂ ಕಾರಣವಾಗಿತ್ತು. ಅದನ್ನೇ ತಿರುಚಿ ಶರಣ್ ರೈ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ. ಶಾಸಕರ ಪತ್ನಿಯನ್ನು ಅವಮಾನಿಸುವ ರೀತಿಯಲ್ಲಿ ಪೋಸ್ಟ್ ಹಾಕಲಾಗಿತ್ತು.
ಮಹಿಳೆಯರ ಗೌರವ ಘನೆತೆಗೆ ಧಕ್ಕೆ ತರುವಂತಹ ಪೋಸ್ಟ್ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಆರೋಪಿ ಶರಣ್ ರೈ ನನ್ನು ಬಂಧಿಸಲಾಗಿದೆ.

