ವಿಜಯಪುರ: ಖಾಸಗಿ ಜೆಟ್ ರೆಡ್ ಬರ್ಡ್ ವಿಮಾನ ಪತನಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಎಂಬ ಗ್ರಾಮದಲ್ಲಿ ನಡೆದಿದೆ.
ಖಾಸಗಿ ಮಿನಿ ವಿಮಾನ ದುರಂತಕ್ಕೀಡಾಗಿದ್ದು, ಹೊಲದ ಬಳಿ ಪತನಗೊಂಡಿದೆ. ವಿಮಾನದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನ ಪತನಕ್ಕೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

