ಬೆಂಗಳೂರು: ನಾಳೆಯಿಂದ ಟೆಕೆಟ್ ದರ ಏರಿಕೆ ಆತಂಕದಲ್ಲಿದ್ದ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮೆಟ್ರೋ ಟಿಕೆಟ್ ದರ ಏರಿಕೆಯನ್ನು ಬಿಎಂಆರ್‌ಸಿಎಲ್ ಕೈಬಿಟ್ಟಿದೆ.
ಕೇಂದ್ರ ಸರ್ಕಾರದ ಸೂಚನೆಯ ಬೆನ್ನಲ್ಲೇ ದರ ಏರಿಕೆ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.
ನಾಳೆಯಿಂದ ಮೆಟ್ರೋ ಟಿಕೆಟ್ ದರ ಏರಿಕೆಯಾಗುವುದಿಲ್ಲ. ಟಿಕೆಟ್ ದರ ಏರಿಕೆ ಮಾಡದಂತೆ ಬಿಎಂಆರ್‌ಸಿಎಲ್ ಎಂಡಿಗೆ ಕೇಂದ್ರ ಸರ್ಕಾರದಿಂದ ಇ-ಮೇಲ್ ಬಂದಿದೆ. ಇದರ ಬೆನ್ನಲ್ಲೇ ಟಿಕೆಟ್ ದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ನಾಳೆಯಿಂದ ಶೇಕಡ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಈ ಕುರಿತಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಕೇಳಿ ಬಂದಿತ್ತು. ಇದೀಗ ಟಿಕೆಟ್ ದರ ಏರಿಕೆ ಮಾಡದಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಮೆಟ್ರೋ ಟಿಕೆಟ್ ದರ ಏರಿಕೆ ಸ್ಥಗಿತಗೊಳಿಸಿದೆ ಎನ್ನಲಾಗಿದೆ.

