ರಾಮನಗರ: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚೆಂದೂರಾಯನ ಹಳ್ಳಿಯ ಸಮೀಪ ನಡೆದಿದೆ.
ಶಂಕರ್(23), ಮೋಹಿತ್(17) ಮೃತಪಟ್ಟವರು. ರಾಮನಗರದ ಸಿದ್ದಗಂಗಯ್ಯನ ಪಾಳ್ಯದ ನಿವಾಸಿಗಳಾಗಿರುವ ಇಬ್ಬರು ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದಾರೆ. ಈ ವೇಳೆ ಓರ್ವ ನೀರಲ್ಲಿ ಮುಳುಗಿದ್ದು, ಆತನ ರಕ್ಷಿಸಲು ಹೋದ ಮತ್ತೊಬ್ಬ ಕೂಡ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮಾಗಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

