HomeLatest Newsಸೇತುವೆಗೆ ಬೈಕ್ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಸೇತುವೆಗೆ ಬೈಕ್ ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬೀದರ್: ಸೇತುವೆಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮತ್ತು ಮಗಳು ಸಾವನ್ನಪ್ಪಿದ್ದಾರೆ.

ಹಳ್ಳಿಖೇಡ-ಬಿ ಸಮೀಪ ನಾಗಣ್ಣ ಕ್ರಾಸ್ ಹತ್ತಿರ ಅಪಘಾತ ಸಂಭವಿಸಿದೆ. ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಹಳ್ಳಿಖೇಡ-ಬಿ ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ನಿವಾಸಿಗಳಾದ ವೆಂಕಟ  ಕರಟಮಲ(40), ಪತ್ನಿ ಶಿಲ್ಪಾ(35), ಪುತ್ರಿ ರಕ್ಷಿತಾ(12) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗ ದಿಗಂಬರ್(15) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೀದರ್ ನಿಂದ ರಾಜೇಶ್ವರ ಗ್ರಾಮಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ನಾಲ್ವರು ಒಂದೇ ಬೈಕ್ ನಲ್ಲಿ ಬರುವಾಗ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬೈಕ್ ಸೇತುವೆಗೆ ಡಿಕ್ಕಿ ಹೊಡೆದಿದೆ. ಹಳ್ಳಿಖೇಡ –ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular