HomeLatest NewsBreaking News: ಮೆಟ್ರೋ ರೈಲು ಹತ್ತಲು ಹೊಟಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

Breaking News: ಮೆಟ್ರೋ ರೈಲು ಹತ್ತಲು ಹೊಟಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

ಬೆಂಗಳೂರು ನಗರದ ಆರ್.ವಿ.ರಸ್ತೆ ನಮ್ಮ ಮೆಟ್ರೋ ನಿಲ್ದಾಣದ ಬಳಿಕ ಭಾರೀ ಹೈಡ್ರಾಮ ನಡೆದಿದೆ. ಮೆಟ್ರೋ ರೈಲು ಏರಲು ಹೊರಟಿದ್ದ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇತರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೋಮವಾರ ನಮ್ಮ ಮೆಟ್ರೋ ದರ ಏರಿಕೆ ವಿರುದ್ಧ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಮುಂತಾದವರು ಪ್ರತಿಭಟನೆ ನಡೆಸುತ್ತಿದ್ದರು.

ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು, ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೋ ಅಂಟಿಸಿಕೊಂಡು ಮೆಟ್ರೋ ಏರಲು ಹೊರಟಿದ್ದರು. ಆಗ ಪೊಲೀಸರು ಅವರನ್ನು ತಡೆದರು. ಆಗ ತೇಜಸ್ವಿ ಸೂರ್ಯ ಮತ್ತು ಪೊಲೀಸರ ನಡುವೆ ವಾಗ್ವದ ನಡೆಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರವೂ ಸಂಸದ ತೇಜಸ್ವಿ ಸೂರ್ಯ ನಮ್ಮ ಮೆಟ್ರೋ ದರ ಏರಿಕೆ ಖಂಡಿಸಿ ನಮ್ಮ ಮೆಟ್ರೋದಲ್ಲಿ #RollBackFareHike ಎಂಬ ಟೀ ಶರ್ಟ್ ಧರಿಸಿ ಪ್ರಯಾಣ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದರು. MR CM CUT THE DRAMA ಎಂಬ ಬರಹದ ಟೀ ಶರ್ಟ್ ಮೂಲಕ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ದರ ಏರಿಕೆ ಕೈಬಿಟ್ಟ ಬಿಎಂಆರ್‌ಸಿಎಲ್: ಬಿಎಂಆರ್‌ಸಿಎಲ್ ಫೆಬ್ರವರಿ 5ರಂದು ಫೆ.9ರ ಸೋಮವಾರದಿಂದ ನಮ್ಮ ಮೆಟ್ರೋ ದರ ಶೇ  5ರಷ್ಟು ಏರಿಕೆಯಾಗಲಿದೆ ಎಂದು ಹೇಳಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಸಂಸದರಾದ ತೇಜಸ್ವಿ ಸೂರ್ಯ, ಪಿಸಿ ಮೋಹನ್ ಕೇಂದ್ರ ಸರ್ಕಾರದ ಮೊರೆ ಹೋಗಿದ್ದರು. ಅಂತಿಮವಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಸೂಚನೆ ಮೇರೆಗೆ ದರ ಏರಿಕೆ ಪ್ರಸ್ತಾವನೆಗೆ ಬಿಎಂಆರ್‌ಸಿಎಲ್ ತಾತ್ಕಾಲಿಕ ತಡೆ ನೀಡಿತ್ತು.

ಈ ಕುರಿತು ಭಾನುವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಬಿಎಂಆರ್‌ಸಿಎಲ್, ‘ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್ ತಿಳಿಸುವುದೇನೆಂದರೆ, ದಿನಾಂಕ 5ನೇ ಫೆಬ್ರವರಿ 2026ರಂದು ಪ್ರಕಟಿಸಿದ್ದ ಮಾಧ್ಯಮ ಪ್ರಕಟಣೆಯಲ್ಲಿ ದಿನಾಂಕ 9ನೇ ಫೆಬ್ರವರಿ 2026ರಿಂದ ವಾರ್ಷಿಕಸ್ವಯಂಚಾಲಿತ ದರ ಜಾರಿಗೆ ಬರಲಿದೆ ಎಂದು ತಿಳಿಸಲಾಗಿತ್ತು. ಆದರೆ ಈ ನಿರ್ಧಾರವನ್ನು ಮುಂದಿನ ಆದೇಶಗಳ ತನಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ’ ಎಂದು ಹೇಳಿತ್ತು.

‘ಪರಿಷ್ಕೃತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು. ಬಿಎಂಆರ್‌ಸಿಎಲ್ ಬೆಂಗಳೂರು ನಾಗರಿಕರಿಗೆ ಸುರಕ್ಷಿತ, ನಂಬಿಗಸ್ತ ಮತ್ತು ಕೈಗೆಟುಕುವ ಮೆಟ್ರೋ ಸೇವೆಗಳನ್ನು ಒದಗಿಸಲು ಸದಾ ಬದ್ಧವಾಗಿದೆ’ ಎಂದು ತಿಳಿಸಿತ್ತು.

ಬಿಜೆಪಿ ಸೋಮವಾರ ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುವ ಮಾಹಿತಿ ಇತ್ತು. ಆದ್ದರಿಂದ ಬಿಎಂಆರ್‌ಸಿಎಲ್ ಭಾನುವಾರವೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರವನ್ನು ಬರೆದಿತ್ತು. ನ್ಯಾಷನಲ್ ಕಾಲೇಜು ಸೇರಿದಂತೆ ವಿವಿಧ ಮೆಟ್ರೋ ನಿಲ್ದಾಣಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಬೇಕು. ಮೆಟ್ರೋ ಸೇವೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿತ್ತು.

ಭಾನುವಾರ ಸಾಮಾಜಿಕ  ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ತೇಜಸ್ವಿ ಸೂರ್ಯ, ‘ನೀಡಿದ ಭರವಸೆಯಂತೆ, ನಾಳೆಯಿಂದ ಪ್ರಸ್ತಾಪಿತ ಮೆಟ್ರೋ ಭಾಡಿ ಹೆಚ್ಚಳವನ್ನು BMRCL ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಈ ಅನ್ಯಾಯಕರ ಹೆಚ್ಚಳವನ್ನು ನಿರಂತರವಾಗಿ ವಿರೋಧಿಸಿದ ಬೆಂಗಳೂರು ಜನತೆಗೆ ಇದು ಒಂದು ಜಯವಾಗಿದೆ. ರಾಜ್ಯ ಸರ್ಕಾರದ ಜನವಿರೋಧಿ ಪ್ರಸ್ತಾಪವನ್ನು ತಡೆಯಲು ಸಮಯೋಚಿತವಾಗಿ ಹಸ್ತಕ್ಷೇಪ ಮಾಡಿದ ಮಾನ್ಯ ನಗರ ವ್ಯವಹಾರಗಳ ಸಚಿವ ಶ್ರೀ ಖಟ್ಟರ್ ಜೀ ಹಾಗೂ ಭಾರತ ಸರ್ಕಾರಕ್ಕೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದು ಹೇಳಿದ್ದರು.

‘ಇದು ಕೇವಲ ತಾತ್ಕಾಲಿಕ ಪರಿಹಾರ ಮಾತ್ರ. ಹಿಂದಿನ ಸರ್ಕಾರಗಳು ಮಾಡಿದಂತೆ ರಾಜ್ಯ ಸರ್ಕಾರವು ಮೆಟ್ರೋಗೆ ಶ್ಯಾಡೋ ಕ್ಯಾಶ್ ಸಹಾಯವನ್ನು ಪುನಃ ನೀಡಬೇಕು ಮತ್ತು ನ್ಯಾಯಸಮ್ಮತ, ವೈಜ್ಞಾನಿಕ ಹಾಗೂ ಪಾರದರ್ಶಕ ಭಾಡಿ ಪರಿಷ್ಕರಣೆಗೆ ಹೊಸ ಭಾಡಿ ನಿಗದಿ ಸಮಿತಿಯನ್ನು ಪುನರ್ ರಚಿಸಲು ಮುಂದಾಗಬೇಕು. ಭಾರೀ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ಕೈಗೆಟುಕುವ ಸಾರ್ವಜನಿಕ ಸಾರಿಗೆಗಾಗಿ ನಮ್ಮ ಹೋರಾಟ ಮುಂದುವರೆಯುತ್ತದೆ’ ಎಂದು ತಿಳಿಸಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular