HomeLatest NewsBIG NEWS: ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

BIG NEWS: ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು: ಕೆನಡಾದಲ್ಲಿ ಕನ್ನಡಿಗನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

37 ವರ್ಷದ ಚಂದನ್ ಕುಮಾರ್ ಹತ್ಯೆಯಾದ ವ್ಯಕ್ತಿ. ಬೆಂಗಳೂರಿನ ನೆಲಮಂಗಲ ಮೂಲದ ತ್ಯಾಮಗೊಂಡ್ಲುವಿನ ನಿವಾಸಿ. ಕಳೆದ 6 ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಭಾನುವಾರ ರಾತ್ರಿ 9 ಗಂಟೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಂದನ್ ಕುಮಾರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಹಲವು ಗುಂಡುಗಳು ಚಂದನ್ ದೇಹವನ್ನು ಹೊಕ್ಕಿವೆ. ಘಟನಾ ಸ್ಥಳದಲ್ಲೇ ಚಂದನ್ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಂದನ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಸಾವನ್ನಪ್ಪಿದ್ದಾಗಿ ಕೆನಡಾ ಪೊಲೀಸರು ನೆಲಮಂಗಲದಲ್ಲಿರುವ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಗನನ್ನು ಕಳೆದುಕೊಂಡಿರುವ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮಗನ ಮೃತದೇಹವನ್ನು ನೆಲಮಂಗಲಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪೋಷಕರು ಮನವಿ ಮಾಡಿದ್ದಾರೆ.

ಚಂದನ್ ಕುಮಾರ್ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಮೂಲದವರು. ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದು, ಎಲ್ ಅಂಡ್ ಟಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಚಂದನ್ ತಂದೆ ನಂದಕುಮಾರ್ ಅವರು ನಿವೃತ್ತ ಶಿಕ್ಷಕರಾಗಿದ್ದು, ತಾಯಿ ಹಾಗೂ ಕುಟುಂಬದವರು ತ್ಯಾಮಗೊಂಡ್ಲು ಗ್ರಾಮದಲ್ಲೇ ವಾಸಿಸುತ್ತಿದ್ದಾರೆ.

ಫೆ.8ರಂದು ಚಂದನ್ ಕೆನಡಾದ ವುಡ್​ಬೈನ್ ಮಾಲ್ ಬಳಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಂದನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು.

ಚಂದನ್ ತನ್ನ ಕೆಲಸದ ಜೊತೆಗೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ವಿದೇಶದಲ್ಲಿ ಹರಡುತ್ತಿದ್ದರು. ಕೆಲಸವನ್ನರಸಿ ಕೆನಡಾಗೆ ಹೋದ ಭಾರತೀಯರು ವಿಶೇಷವಾಗಿ ಕನ್ನಡಿಗರಿಗೆ ಕೈಲಾದ ಸಹಾಯ ಮಾಡುತ್ತಿದ್ದರು. ಕನ್ನಡಿಗರಿಗಾಗಿ ಸಂಘಟನೆಗಳ ಮುಖಾಂತರ ಸೇವೆಗಳನ್ನು ಒದಗಿಸುತ್ತಿದ್ದರು ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular