HomeLatest Newsರಾಜ್ಯದ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ಆಹಾರ ಮಳಿಗೆ ವಾಹನ ಖರೀದಿಗೆ ಸಿಗಲಿದೆ 3...

ರಾಜ್ಯದ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ಆಹಾರ ಮಳಿಗೆ ವಾಹನ ಖರೀದಿಗೆ ಸಿಗಲಿದೆ 3 ಲಕ್ಷ ಸಹಾಯಧನ

ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುತ್ತದೆ. ಉಳಿಕೆ ಮೊತ್ತವನ್ನು ಬ್ಯಾಂಕ್ ಗಳು/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ.

ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರ (ಬೆಸ್ತರ್)ಬುಂಡ್, ಬೈಲಪತ್ತರ್, ಬೈರಾಗಿ(ಬಾವ), ಬಜಿನಿಯ, ಬಾಲಸಂತೋಶಿ-ಜೋಶಿ, ಬಾಜಿಗರ್, ಭರಡಿ, ಬುಡ್ ಬುಡಕಿ-ಜೋಶಿ-ಗೋಂದಳಿ, ಚಾರ, ಚಿತ್ರಕಶಿ-ಜೋಶಿ, ದರ್ ವೇಶ್, ದವೇರಿ, ಧೋಲಿ, ದೊಂಬರಿ, ದೊಂಬಿದಾಸ, ದುರ್ಗ ಮುರ್ಗ (ಬುರ್ ಬುರುಚ), ಗರಡಿ, ಘಿಸಡಿ, ಗೊಲ್ಲ, ಗೊಂದಳಿ, ಗೋಪಲ್, ಹೆಳವ, ಹಾವ್ ಗಾರ(ಹಾವಾಡಿಗರ್), ಜೋಗಿ, ಜೋಶಿ ಸಾದಾ ಜೋಶಿ, ಕಾಶಿಕಪಾಡಿ, ಕಟಬು, ಕೆಲ್‍ಕಾರಿ, ಕಿಳ್ಳೆಕ್ಯಾತಸ್, ಕೊಲಾತಿ, ಮಸನಿಯ ಯೋಗಿ, ನಂದಿವಾಸ-ಜೋಶಿ-ಘೊಂಡಲ್-ಫುಲ್ ಮಲ್ಲಿ, ನಾಥಪಂಥಿ, ಡೌರಿಗೋಸಾವಿ, ನೀರ್ ಶಿಕಾರಿ, ಒಂಗಲ್, ಪಿಚಗುಂಟಲು, ಸನ್ ಸಿಯ, ಸರಾನಿಯ, ಸರೋಡಿ, ಶಿಕ್ಕಲಿಗಾರ್, ತಿರುಮಲಿ, ಪಡಿ, ವಗ್ರಿ, ವೈಡು, ವಾಸುದೇವ್, ವಿರ್ ಈ ಎಲ್ಲಾ ಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.

ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್, 06 ಕೊನೆಯ ದಿನವಾಗಿದೆ. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವೆಬ್‍ಸೈಟ್ www.kaadc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ. ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004 ಮತ್ತು 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:08272-221656 ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular