HomeLatest Newsಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: ಎಫ್ಐಆರ್ ದಾಖಲು

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: ಎಫ್ಐಆರ್ ದಾಖಲು

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ವಿಧಾನಸೌಧದ ಮುಂದೆ ಪ್ರಧಾನಿ ಮೋದಿ ಕುರಿತು ಬ್ಯಾನರ್ ಅಳವಡಿಸಲಾಗಿತ್ತು. ಬ್ಯಾನರ್ ಅಳವಡಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿತ್ತು. ಕಾನೂನು ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ದೂರು ನೀಡಿದ್ದು, ಬಿಜೆಪಿ ಮುಖಂಡರ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಬ್ಯಾನರ್ ಹಾಕಿ ಅವರ ತೇಜೋವಧೆ ಮಾಡಲು ಯತ್ನಿಸಿದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಕೇಂದ್ರ ವಿಭಾಗ ಡಿಸಿಪಿಗೆ ಸೋಮವಾರ ದೂರು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಮೋದಿ ಭಾವಚಿತ್ರ ಬಳಸಿ ದೇಶದ ಸಂಸತ್ತಿಗೆ ಬರಲು ಧೈರ್ಯವಿಲ್ಲದ ಪುಕ್ಕಲ ಪ್ರಧಾನಿ ದೇಶವನ್ನು ಹೇಗೆ ರಕ್ಷಿಸುತ್ತಾರೆ ಎನ್ನುವ ಬರಹವಿದ್ದ ಬ್ಯಾನರ್ ಅನ್ನು ಕಾನೂನುಬಾಹಿರವಾಗಿ ವಿಧಾನಸೌಧದ ಮುಂದೆ ಹಾಕಿ ಪ್ರಧಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಂಚು ರೂಪಿಸಿದ್ದಾರೆ. ರಾಜ್ಯದಲ್ಲಿ ಅಶಾಂತಿ, ರಾಜಕೀಯ ದಂಗೆ ಪ್ರಚೋದಿಸುತ್ತಿರುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಬಂಧಿಸಬೇಕೆಂದು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular