ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾದ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀಡುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 23ಕ್ಕೆ ಮುಂದೂಡಿದೆ.
ರಾಜ್ಯಕಾರ್ಮಿಕ ಇಲಾಖೆ 2025 ರ ನವೆಂಬರ್ 20ರಂದು ಹೊರಡಿಸಿದ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ಉದ್ಯೋಗದಾತರ ಸಂಘ, ಬೆಂಗಳೂರು ಹೋಟೆಲ್ ಗಳ ಸಂಘ, ಫೆಸಿಲ್ ಏರೋಸ್ಪೇಸ್ ಟೆಕ್ನಾಲಜಿ ಲಿಮಿಟೆಡ್ ಸೇರಿದಂತೆ ವಿವಿಧ ಆಡಳಿತ ಮಂಡಳಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆಯವರ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿದ್ದು, ಫೆಬ್ರವರಿ 23ಕ್ಕೆ ವಿಚಾರಣೆ ಮುಂದೂಡಲಾಗಿದೆ.

