HomeLatest Newsಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು: ಎಸಿ ಸೇರಿ ಆರು ಜನರ ವಿರುದ್ಧ ಪ್ರಕರಣ

ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು: ಎಸಿ ಸೇರಿ ಆರು ಜನರ ವಿರುದ್ಧ ಪ್ರಕರಣ

ಬೀದರ್: ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ತಾಳಮಡಗಿಯಲ್ಲಿ ಜನವರಿ 16ರಂದು ಮಾಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣದಲ್ಲಿ ಎಸಿ ಸೇರಿ ಆರು ಜನರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಉಪಲೋಕಾಯುಕ್ತ ಬಿ. ವೀರಪ್ಪ ನಿರ್ದೇಶನ ನೀಡಿದ್ದಾರೆ.

ಬೀದರ್ ಉಪ ವಿಭಾಗಾಧಿಕಾರಿ ಮೊಹಮ್ಮದ್ ಶಕೀಲ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಪ್ರಕಾಶ್ ಕುದರಿ, ಚಿಟಗುಪ್ಪ ತಹಶೀಲ್ದಾರ್ ಮಂಜುನಾಥ ಪಂಚಾಳ, ಹುಮನಾಬಾದ್ ಡಿವೈಎಸ್ಪಿ ಮಡೋಳಪ್ಪ, ಚಿಟಗುಪ್ಪ ಪಿಐ ಶ್ರೀನಿವಾಸ್, ಸಬ್ ಇನ್ಸ್ಪೆಕ್ಟರ್ ಮಹೇಂದ್ರ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಬೀದರ್ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ಮಾಂಜಾ ನಿಷೇಧಿಸಿ ಇದಕ್ಕೆ ಪೂರಕ ದಾಖಲೆಗಳೊಂದಿಗೆ ಮಾರ್ಚ್ 3ರಂದು ಖುದ್ದಾಗಿ ಹಾಜರಾಗಿ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಬೀದರ್ ಜಿಲ್ಲಾಧಿಕಾರಿ ಮತ್ತು ಎಸ್ಪಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular