HomeKarnatakaಗ್ರಾಮ ಲೆಕ್ಕಾಧಿಕಾರಿ, ಸಹಾಯಕರಿಗೆ ಕಂದಾಯ ಇಲಾಖೆಯಿಂದ 5 ಕೋಟಿ ರೂ. ಪ್ರೋತ್ಸಾಹಧನ

ಗ್ರಾಮ ಲೆಕ್ಕಾಧಿಕಾರಿ, ಸಹಾಯಕರಿಗೆ ಕಂದಾಯ ಇಲಾಖೆಯಿಂದ 5 ಕೋಟಿ ರೂ. ಪ್ರೋತ್ಸಾಹಧನ

ಧಾರವಾಡ: ಮಾರ್ಚ್ ಅಂತ್ಯದೊಳಗೆ ಗುರಿ ಮೀರಿ ಅತಿ ಹೆಚ್ಚು ಪೌತಿ ಖಾತೆ ಮಾಡುವ ರಾಜ್ಯದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಹಾಗೂ ಗ್ರಾಮ ಸಹಾಯಕರಿಗೆ ಕಂದಾಯ ಇಲಾಖೆಯಿಂದ 5 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕಂದಾಯ ಇಲಾಖೆಯಲ್ಲಿ ಸಾರ್ವಜನಿಕ ಸ್ನೇಹಿ ಕಾರ್ಯಕ್ರಮಗಳನ್ನು ಕೈಗೊಂಡು ಅನೇಕ ಸುಧಾರಣೆಗಳನ್ನು ತರಲಾಗಿದೆ. ಮೃತರ ಕುಟುಂಬಗಳ ಆಸ್ತಿಯನ್ನು ವಾರಸುದಾರರ ಹೆಸರಿಗೆ ವರ್ಗಾಯಿಸುವ ಪೌತಿ ಖಾತೆ ಮಾಡುವ ಕಾರ್ಯ ಉತ್ತಮವಾಗಿ ನಡೆದಿದ್ದು, ಧಾರವಾಡ ಜಿಲ್ಲೆಯಲ್ಲಿ 58,212 ಪೌತಿ ಖಾತೆಗಳ ಪೈಕಿ 36,046 ಪ್ರಕರಣಗಳು ಮುಕ್ತಾಯವಾಗಿದ್ದು, ಬಾಕಿ ಇರುವ 4,896 ಪ್ರಕರಣಗಳನ್ನು ಮಾರ್ಚ್ ಅಂತ್ಯದೊಳಗೆ ಮುಕ್ತಾಯಗೊಳಿಸಲು ಸೂಚಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೌತಿ ಖಾತೆಯಲ್ಲಿ 2026ರ ಮಾರ್ಚ್ ನೊಳಗೆ ಗುರಿಮಿರಿ ಸಾಧನೆ ಮಾಡುವ ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಹಾಗೂ ಗ್ರಾಮ ಸಹಾಯಕರಿಗೆ ಕಂದಾಯ ಇಲಾಖೆಯಿಂದ 5 ಕೋಟಿ ರೂ. ಪ್ರೋತ್ಸಾಹ ಧನ ವಿತರಿಸಲಾಗುತ್ತದೆ ಎಂದು ಹೇಳಿದರು.

ಧಾರವಾಡ ಜಿಲ್ಲೆಯಲ್ಲಿ ಹಕ್ಕುಪತ್ರ ವಿತರಣೆಗೆ 5,378 ಅರ್ಜಿಗಳು ಸಲ್ಲಿಕೆಯಾಗಿದ್ದು, 4,331 ಅರ್ಜಿಗಳನ್ನು ಅನುಮೋದಿಸಿ, ವಿತರಣೆಗೆ ಸಿದ್ದಪಡಿಸಲಾಗಿದೆ ಮತ್ತು ಬಾಕಿ ಇರುವ 915 ಅರ್ಜಿಗಳ ವಿಲೆವಾರಿಗೆ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.

 ಜಿಲ್ಲೆಯಲ್ಲಿ ಆಧಾರ್ ಸೀಡಿಂಗ್ ಪ್ರಗತಿಯಲ್ಲಿದ್ದು ಶೇ.85.80ರಷ್ಟು ಗುರಿ ಸಾಧಿಸಲಾಗಿದೆ. ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 9 ಮೇಲ್ಮನವಿ ಪ್ರಕರಣಗಳು, ಉಪವಿಭಾಗಧಿಕಾರಿಗಳ ನ್ಯಾಯಾಲಯದಲ್ಲಿ 11 ಪ್ರಕರಣಗಳು, ವಿವಿಧ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 69 ಪ್ರಕರಣಗಳು ಬಾಕಿ ಇದ್ದು, ಶೀಘ್ರದಲ್ಲಿ ಇತ್ಯರ್ಥಪಡಿಸಲು ಅವರು ಸೂಚಿಸಿದರು. ಮತ್ತು ಭೂಮಿ ವಿಭಾಗದಲ್ಲಿನ ಬಾಕಿ ಪ್ರಕರಣಗಳನ್ನು ನಿಯಮಾನುಸಾರ ಮುಕ್ತಾಯಗೊಳಿಸಲು ಅವರು ತಿಳಿಸಿದರು.

ಭೂಸುರಕ್ಷಾ ಯೋಜನೆ, ಲ್ಯಾಂಡ್‍ಬಿಟ್ ಯೋಜನೆ, ಇ-ಆಫೀಸ್ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅವರು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಎಫ್.ಎಚ್.ಜಕ್ಕಪ್ಪನವರ ಮಾತನಾಡಿದರು. ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ವಂದಿಸಿದರು. ಐಎಎಸ್ ಪ್ರೋಬೆಷನರಿ ಅಧಿಕಾರಿ ರೀತಿಕಾ ವರ್ಮಾ ವೇದಿಕೆಯಲ್ಲಿದ್ದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು, ಕಂದಾಯ ಇಲಾಖೆಯ ಎಲ್ಲ ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಹೊಬಳಿವಾರು ಆಯ್ದ ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular