HomeLive NewsBREAKING : ಚಿಕ್ಕಬಳ್ಳಾಪುರದಲ್ಲಿ ಬೊಲೆರೊ ವಾಹನದ ಮೇಲೆ ಕಂಟೈನರ್ ಪಲ್ಟಿಯಾಗಿ ಓರ್ವ ಸಾವು , ಹಲವರು...

BREAKING : ಚಿಕ್ಕಬಳ್ಳಾಪುರದಲ್ಲಿ ಬೊಲೆರೊ ವಾಹನದ ಮೇಲೆ ಕಂಟೈನರ್ ಪಲ್ಟಿಯಾಗಿ ಓರ್ವ ಸಾವು , ಹಲವರು ಸಿಲುಕಿರುವ ಶಂಕೆ

ಚಿಕ್ಕಬಳ್ಳಾಪುರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಬೃಹತ್ ಕಂಟೈನರ್ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಹನದಲ್ಲಿದ್ದ ಇನ್ನೂ ಹಲವರು ಕಂಟೈನರ್ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯ ವಿವರ
ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಅತಿ ವೇಗವಾಗಿ ಬಂದ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ, ಪಕ್ಕದಲ್ಲೇ ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಉರುಳಿ ಬಿದ್ದಿದೆ. ಕಂಟೈನರ್ನ ಭಾರಕ್ಕೆ ಬೊಲೆರೋ ವಾಹನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಬ್ಬಿಣದ ರಾಶಿಯಂತಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತ ವ್ಯಕ್ತಿ ಬೆಂಗಳೂರು ಮೂಲದವರೆಂದು ಶಂಕಿಸಲಾಗಿದೆ.: ವಾಹನದ ಒಳಗೆ ಎಷ್ಟು ಮಂದಿ ಇದ್ದರು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಕಂಟೈನರ್ ಅಡಿ ಹಲವರು ಸಿಲುಕಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಜೆಸಿಬಿ ಮತ್ತು ಕ್ರೇನ್ ಬಳಕೆ: ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಧಾವಿಸಿದ್ದಾರೆ. ಎರಡು ಬೃಹತ್ ಕ್ರೇನ್ಗಳ ಸಹಾಯದಿಂದ ಕಂಟೈನರ್ ಅನ್ನು ಮೇಲಕ್ಕೆತ್ತುವ ಹರಸಾಹಸ ನಡೆಸಲಾಗುತ್ತಿದೆ.ಈ ಘಟನೆಯು ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular