HomeLatest Newsಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ.!

ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ.!

ಗುವಾಹಟಿ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್ನ ಹಿರಿಯ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ಧ ಮಂಗಳವಾರ 500 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ.

ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಗೌರವ್ ಗೊಗೊಯ್ ಅವರು ಕಳೆದ ವಾರ ಗಂಭೀರ ಆರೋಪವೊಂದನ್ನು ಮಾಡಿದ್ದರು. ಕಾಂಗ್ರೆಸ್ ಪಕ್ಷ ನಡೆಸಿದ ತನಿಖೆಯ ಪ್ರಕಾರ, ಅಸ್ಸಾಂ ರಾಜ್ಯಾದ್ಯಂತ ಸುಮಾರು 12,000 ಬಿಘಾ ಭೂಮಿಯನ್ನು ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಕುಟುಂಬಸ್ಥರು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದರು.
ಈ ಆರೋಪಗಳು ಹೊರಬಂದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿಗಳು, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಂತಹ ಸುಳ್ಳು ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಘೋಷಿಸಿದ್ದರು. ಅದರಂತೆ, ಮಂಗಳವಾರ 500 ಕೋಟಿ ರೂ. ಪರಿಹಾರ ಕೋರಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ತಮ್ಮ ‘X’ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ, “ಪತ್ರಿಕಾಗೋಷ್ಠಿಯ ಮೂಲಕ ನನ್ನ ವಿರುದ್ಧ ಸುಳ್ಳು, ದುರುದ್ದೇಶಪೂರಿತ ಮತ್ತು ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಕ್ಕಾಗಿ ಈ ನಾಯಕರ ವಿರುದ್ಧ 500 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ” ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಟ್ ಅಂಡ್ ರನ್ ರಾಜಕಾರಣದ ಕಾಲ ಮುಗಿದಿದೆ” ಎಂದು ಎಚ್ಚರಿಸಿರುವ ಅವರು, “ಅವರಲ್ಲಿ ಸ್ವಲ್ಪವಾದರೂ ಧೈರ್ಯ ಅಥವಾ ಸಾಕ್ಷ್ಯವಿದ್ದರೆ, ಪ್ರತಿ ಆರೋಪವನ್ನೂ ನ್ಯಾಯಾಲಯದ ಮುಂದೆ ಸಾಬೀತುಪಡಿಸಲಿ. ಗಾಂಧಿ ಕುಟುಂಬದ ಗುಲಾಮರ ಅಪಪ್ರಚಾರ ಅಥವಾ ರಾಜಕೀಯ ನಾಟಕಗಳಿಗೆ ನಾನು ಹೆದರುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಗೌರವ್ ಗೊಗೊಯ್ ಮತ್ತು ಪಾಕಿಸ್ತಾನ ನಂಟು ಆರೋಪ
ಇತ್ತೀಚೆಗೆ ಗೌರವ್ ಗೊಗೊಯ್ ಮತ್ತು ಅವರ ಕುಟುಂಬದ ವಿರುದ್ಧ ಸಿಎಂ ಗಂಭೀರ ಆರೋಪಗಳನ್ನು ಮಾಡಿದ್ದರು. ವಿಶೇಷ ತನಿಖಾ ದಳದ (SIT) ವರದಿಯನ್ನು ಉಲ್ಲೇಖಿಸಿದ ಶರ್ಮಾ, “ಗೌರವ್ ಗೊಗೊಯ್, ಅವರ ಬ್ರಿಟಿಷ್ ಮೂಲದ ಪತ್ನಿ ಎಲಿಜಬೆತ್ ಕೋಲ್ಬರ್ನ್ ಮತ್ತು ಪಾಕಿಸ್ತಾನಿ ಪ್ರಜೆ ಅಲಿ ತೌಕೀರ್ ಶೇಖ್ ನಡುವೆ ಆಳವಾದ ನಂಟಿದೆ” ಎಂದು ಆರೋಪಿಸಿದ್ದರು. ಅಲ್ಲದೆ, ಗೌರವ್ ಗೊಗೊಯ್ ಅವರು ಕೆಲವು ಯುವಕರನ್ನು ಪಾಕಿಸ್ತಾನ ರಾಯಭಾರ ಕಚೇರಿಗೆ ಕರೆದೊಯ್ದಿರುವ ಫೋಟೋವನ್ನೂ ಪ್ರಸ್ತಾಪಿಸಿ, ಇದು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಅಸ್ಸಾಂನ ಕ್ಯಾಪ್ಟನ್ ಜಿಂಟು ಗೊಗೊಯ್ ಅವರಿಗೆ ಮಾಡಿದ ಅವಮಾನ ಎಂದು ಟೀಕಿಸಿದ್ದರು.

ಗೌರವ್ ಗೊಗೊಯ್ ತಿರುಗೇಟು:
ಸೋಮವಾರವಷ್ಟೇ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದ ಗೌರವ್ ಗೊಗೊಯ್, “ಮುಖ್ಯಮಂತ್ರಿಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡುತ್ತಿದ್ದಾರೆ. ವಿವಾದಕ್ಕೆ ನನ್ನ ಅಪ್ರಾಪ್ತ ಮಕ್ಕಳನ್ನು ಎಳೆದು ತರುತ್ತಿರುವುದು ಮತ್ತು ಪಾಕಿಸ್ತಾನದೊಂದಿಗೆ ನಂಟಿದೆ ಎಂದು ಸುಳ್ಳು ಹೇಳುತ್ತಿರುವುದು ಕಾನೂನುಬಾಹಿರ” ಎಂದು ಕಿಡಿಕಾರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular