HomeJobsಐಟಿಐ, ಡಿಪ್ಲೊಮಾ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಐಟಿಐ, ಡಿಪ್ಲೊಮಾ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಕೊಪ್ಪಳ: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಫೆಬ್ರವರಿ 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಾಕ್ ಇನ್ ಇಂಟರ್‌ ವ್ಯೂವ್ ಆಯೋಜಿಸಲಾಗಿದೆ.

ಜೆಎಸ್‌ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಸಂಸ್ಥೆಯು ಅಪ್ರೆಂಟಿಸ್ ತರಬೇತಿಗೆ ನೇಮಕ ಮಾಡಿಕೊಳ್ಳಲಿದ್ದು, ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲರಿಗೂ ಉಚಿತ ಪ್ರವೇಶವಿದೆ. ಯಾವುದೇ ವೃತ್ತಿಯ ಐ.ಟಿ.ಐ, ಡಿಪ್ಲೊಮಾ ಮೆಕ್ಯಾನಿಕಲ್, ಡಿಪ್ಲೊಮಾ ಇಲೆಕ್ಟ್ರಿಕಲ್, ಡಿಪ್ಲೊಮಾ ಇಲೆಕ್ಟ್ರಾನಿಕ್ಸ್, ಡಿಪ್ಲೊಮಾ ಮೆಟಲರ್ಜಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು.

18 ರಿಂದ 25 ವರ್ಷ ವಯೋಮಿತಿಯ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ (ರೆಜ್ಯುಮ್) ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಉದ್ಯೋಗಾಕಾಂಕ್ಷಿಗಳು  https://forms.gle/dsumj4Yu2QQA15yr7 ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular