HomeKarnatakaBIG NEWS: ಬಾಲ್ಯ ವಿವಾಹ ಕೇಸ್ ರದ್ದು ಮಾಡಲು ಅನಕ್ಷರತೆ ಆಧಾರವಾಗಲ್ಲ: ಹೈಕೋರ್ಟ್

BIG NEWS: ಬಾಲ್ಯ ವಿವಾಹ ಕೇಸ್ ರದ್ದು ಮಾಡಲು ಅನಕ್ಷರತೆ ಆಧಾರವಾಗಲ್ಲ: ಹೈಕೋರ್ಟ್

ಬೆಂಗಳೂರು: ಬಾಲ್ಯ ವಿವಾಹ ಕೇಸ್ ರದ್ದು ಮಾಡಲು ಅನಕ್ಷರತೆ ಆಧಾರವಾಗದು ಎಂದು ಹೈಕೋರ್ಟ್ ಹೇಳಿದ್ದು, ಪೋಷಕರ ಮೇಲಿನ ಕೇಸ್ ರದ್ದತಿಗೆ ನಿರಾಕರಿಸಿದ ಬಾಲ್ಯ ವಿವಾಹ ಮಾಡಿದ ಪೋಷಕರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ಅನಕ್ಷರತೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

16 ವರ್ಷ 9 ತಿಂಗಳ ವಯಸ್ಸಿನ ಬಾಲಕಿಗೆ ಮದುವೆ ಮಾಡಿದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ತಡೆ ಕಾಯ್ದೆಯಡಿ ಗೌರಿಬಿದನೂರು ಗ್ರಾಮಾಂತರ ಠಾಣಾ ಪೋಲೀಸರು ತಮ್ಮ ವಿರುದ್ಧ ದಾಖಲಾಗಿರುವ ನ್ಯಾಯಾಲಯದ ವಿಚಾರಣೆ ರದ್ದು ಕೋರಿ ಅಶೋಕ್(56), ಅಶ್ವತ್ಥ್ ನಾರಾಯಣ್(55), ರಂಗಮ್ಮ(49), ರಾಮಾಂಜಿನಮ್ಮ(48), ಶ್ರೀರಾಮಪ್ಪ(56) ಹೈಕೋರ್ಟ್ ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಮದುವೆಯಾಗಿರುವ ಯುವಕ- ಯುವತಿಯ ಪೋಷಕರಾಗಿದ್ದಾರೆ. ಯುವಕ -ಯುವತಿ ಪ್ರೀತಿಸುತ್ತಿದ್ದರು. ಅದಕ್ಕಾಗಿ ಮದುವೆ ಮಾಡಲಾಗಿದೆ. ದಂಪತಿಗೆ ಮಗು ಇದೆ. ಅರ್ಜಿದಾರರು ಅನಕ್ಷರಸ್ಥರು, ತಿಳಿವಳಿಕೆ ಇಲ್ಲದೆ ಬಾಲ್ಯ ವಿವಾಹ ಮಾಡಿದ್ದಾರೆ. ಹೀಗಾಗಿ ಪ್ರಕರಣ ರದ್ದು ಮಾಡಬೇಕೆಂದು ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಕೆರಳಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಅನಕ್ಷರತೆ ಬಾಲ್ಯ ವಿವಾಹ ಕೇಸ್ ರದ್ದು ಮಾಡಲು ಆಧಾರವಾಗುವುದಿಲ್ಲ. ಬಾಲ್ಯ ವಿವಾಹ ಪದ್ಧತಿ ನಿಲ್ಲಬೇಕು. ಪೋಷಕರು ಏನೆಂದು ತಿಳಿದುಕೊಂಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಮದುವೆಯಾಗಿರುವ ಯುವತಿಗೆ ಮಗುವಿದೆ ಈ ಅಂಶ ಪರಿಗಣಿಸಿ ಪೋಕ್ಸೊ ಕಾಯ್ದೆ ರದ್ದು ಮಾಡಬಹುದು. ಆದರೆ, ಪೋಷಕರ ವಿರುದ್ಧದ ಬಾಲ್ಯ ವಿವಾಹ ಪ್ರಕರಣ ಮುಂದುವರಿಯಬೇಕು. ಈ ವಿಚಾರದಲ್ಲಿ ದಯೆ ತೋರುವ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular