HomeKarnatakaಸ್ವಂತ ಉದ್ಯೋಗಕ್ಕೆ ಸರ್ಕಾರದ ಬಂಪರ್ ಕೊಡುಗೆ : ಆಹಾರ ವಾಹಿನಿ ಯೋಜನೆಯಡಿ 3 ಲಕ್ಷ ಸಹಾಯಧನಕ್ಕೆ...

ಸ್ವಂತ ಉದ್ಯೋಗಕ್ಕೆ ಸರ್ಕಾರದ ಬಂಪರ್ ಕೊಡುಗೆ : ಆಹಾರ ವಾಹಿನಿ ಯೋಜನೆಯಡಿ 3 ಲಕ್ಷ ಸಹಾಯಧನಕ್ಕೆ ಅರ್ಜಿ ಆಹ್ವಾನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ/ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇತರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಡಿ.ಬಿ.ಸಿ.ಡಿ.ಸಿ. ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ www.dbcdc.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ತೆ, ಕೆ,ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular