ಹಾವೇರಿ ಜಿಲ್ಲೆಯ ವಿವಿಧ ರೈಲು ಯೋಜನೆಗಳ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಈ ಕುರಿತು ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
ಇಂದು ನವದೆಹಲಿಯಲ್ಲಿ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಈ ಕೆಳಕಂಡ ಬೇಡಿಕೆಯೊಳಗೊಂಡ ಮನವಿಯನ್ನು ಸಲ್ಲಿಸಿದೆನು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಯಾವ-ಯಾವ ಯೋಜನೆಗಳು
- ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ: (ಭೂಸ್ವಾಧೀನ ಸಮಸ್ಯೆಗಳ ಕಾರಣದಿಂದಾಗಿ ದೀರ್ಘಕಾಲದಿಂದ ಬಾಕಿಯಿರುವ ಈ ಯೋಜನೆಯ ಪೂರ್ಣಗೊಳಿಸುವಿಕೆ ವಿಳಂಬವಾಗುತ್ತಿದೆ. ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವ ಅಗತ್ಯವಿದೆ.)
- ಯಲವಿಗಿ–ಗದಗ ಹೊಸ ರೈಲು ಮಾರ್ಗ: ಈ ಹೊಸ ಮಾರ್ಗದ ವಿವರವಾದ ಯೋಜನಾ ವರದಿ (DPR) ಯನ್ನು ತ್ವರಿತಗೊಳಿಸಿ, ಯೋಜನೆಗೆ ಅನುಮೋದನೆ ನೀಡುವಂತೆ ವಿನಂತಿಸಲಾಗಿದೆ.
- ಗದಗ–ಕುಷ್ಟಗಿ ಹೊಸ ರೈಲು ಮಾರ್ಗ: ನರೇಗಲ್ ಹಾಗೂ ಗಜೇಂದ್ರಗಡ ಮಾರ್ಗವಾಗಿ ಹೊಸ ರೈಲು ಮಾರ್ಗಕ್ಕೆ ಸಮೀಕ್ಷೆ ನಡೆಸುವಂತೆ ಬೇಡಿಕೆ.
ಈ ಸಂದರ್ಭದಲ್ಲಿ ನಮ್ಮ ಮನವಿಯನ್ನು ಆಲಿಸಿದ ಸಚಿವರು ಶ್ರೀಘ್ರವಾಗಿ ಪರಿಶೀಲಿಸಿ, ಕ್ರಮಕೈಗೊಳ್ಳುವುದಾಗಿ ತಿಳಿಸಿದರು ಎಂದು ಬವಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

