HomeIndiaವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆಯ ಎಚ್ಚರಿಕೆ

ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಕೊನೆಯ ಎಚ್ಚರಿಕೆ

ಮುಂಬೈ: ಭಾರತಕ್ಕೆ ಮರಳಿದರೆ ಮಾತ್ರ ಅರ್ಜಿ ವಿಚಾಅರಣೆ ನಡೆಸುವುದಾಗಿ ಬಾಂಬೆ ಹೈಕೋರ್ಟ್ ಉದ್ಯಮಿ ವಿಜಯ್ ಮಲ್ಯಗೆ ಕೊನೆ ಎಚ್ಚರಿಕೆ ನೀಡಿದೆ.

ಬಾಂಬೆ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾಯಮೂರ್ತಿ ಗೌತಮ್ ಅಂಕಡ್ ಪೀಠ ಆರ್ಥಿಕ ಅಪರಾಧಿಗಳ ಕಾಯ್ದೆ ಸಾಂವಿಧಾನಿಕ ಸಿಂಧುತ್ವ ಮತ್ತು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸುವ ಪ್ರಕ್ರಿಯೆಯನ್ನು ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ವಿಜಯ್ ಮಲ್ಯ ಭಾರತಕ್ಕೆ ಬರಲು ಉದ್ದೇಶಿತರಾಗಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸಲು ಹೈಕೋರ್ಟ್ ಕೊನೆ ಅವಕಾಶ ನೀಡಿದೆ. ಅವರು ಭಾರತಕ್ಕೆ ಬಂದರೆ ಮಾತ್ರ ಅರ್ಜಿ ವಿಚಾರಣೆ ನಡೆಸಲಾಗುವುದು. ಇಲ್ಲವಾದಲ್ಲಿ ಅವರ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ತಿಳಿಸಿದೆ.

ಮಲ್ಯ ನ್ಯಾಯಾಲಯದ ಪ್ರಕ್ರಿಯೆಯನ್ನು ತಪ್ಪಿಸುತ್ತಿದ್ದಾರೆ, ಇದರಿಂದ ವಿಚಾರಣೆಯ ಲಾಭ ಪಡೆಯಲು ಸಾಧ್ಯವಿಲ್ಲ. ನಿಮ್ಮ ಅರ್ಜಿಯನ್ನು ನಾವು ವಜಾಗೊಳಿಸುತ್ತಿಲ್ಲ. ನಿಮಗೆ ಮತ್ತೊಂದು ಅವಕಾಶ ಕೊಡುತ್ತಿದ್ದೇವೆ. ಮಲ್ಯ ಭಾರತಕ್ಕೆ ಹಿಂತಿರುಗಬೇಕು. ಭಾರತಕ್ಕೆ ಬಾರದಿದ್ದರೆ ನಿಮ್ಮ ಅರ್ಜಿ ಆಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular