ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 18ನೇ ಪಂದ್ಯ ನಡೆಯುತ್ತಿದ್ದು, ಎ ಗುಂಪಿನ ಭಾರತ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ನಮೀಬಿಯಾ ಫೀಲ್ಡಿಂಗ್ ಆರಿಸಿಕೊಂಡಿದ್ದು, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವ ಭಾರತ ತಂಡದಲ್ಲಿ ಎರಡು ಬದಲಾವಣೆಗಳಾಗಿದ್ದು, ಕಳೆದ ಯುಎಸ್‌ಎ ವಿರುದ್ಧ ಕಣಕ್ಕಿಳಿದಿದ್ದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹಾಗೂ ಬೌಲಿಂಗ್‌ನಲ್ಲಿ ಮಿಂಚಿದ್ದ ಮೊಹಮ್ಮದ್ ಸಿರಾಜ್ ತಂಡದಿಂದ ಹೊರಬಿದ್ದಿದ್ದಾರೆ.
ಅಭಿಷೇಕ್ ಶರ್ಮಾ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಅವರ ಬದಲಿಗೆ ಸಂಜು ಸ್ಯಾಮ್ಸನ್ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಕಳೆದ ಪಂದ್ಯಕ್ಕೆ ಜಸ್‌ಪ್ರೀತ್ ಬುಮ್ರಾ ಅಲಭ್ಯರಾಗಿದ್ದ ಕಾರಣ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಮೊಹಮ್ಮದ್ ಸಿರಾಜ್ ಈ ಪಂದ್ಯದಲ್ಲಿ ಬುಮ್ರಾ ಆಗಮನವಾಗಿರುವ ಕಾರಣ ಹೊರಬಿದ್ದಿದ್ದಾರೆ.
ಭಾರತದ ಆಡುವ ಬಳಗ: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ನಮೀಬಿಯಾ ಆಡುವ ಬಳಗ: ಲೌರೆನ್ ಸ್ಟೀನ್‌ಕ್ಯಾಂಪ್, ಜಾನ್ ಫ್ರೈಲಿಂಕ್, ಜಾನ್ ನಿಕೋಲ್ ಲಾಫ್ಟಿ-ಈಟನ್, ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೆಜೆ ಸ್ಮಿಟ್, ಮಲನ್ ಕ್ರೂಗರ್, ಝೇನ್ ಗ್ರೀನ್ (ವಿಕೆಟ್ ಕೀಪರ್), ರೂಬೆನ್ ಟ್ರಂಪೆಲ್ಮನ್, ಬರ್ನಾರ್ಡ್ ಶೋಲ್ಟ್ಜ್, ಬೆನ್ ಶಿಕೊಂಗೋ, ಮ್ಯಾಕ್ಸ್ ಹೀಂಗೋ.

