HomeKarnatakaBREAKING: ಶಾಸಕ ಭೈರತಿ ಬಸವರಾಜ್ ಸಿಐಡಿ ಪೊಲೀಸರ ವಶಕ್ಕೆ

BREAKING: ಶಾಸಕ ಭೈರತಿ ಬಸವರಾಜ್ ಸಿಐಡಿ ಪೊಲೀಸರ ವಶಕ್ಕೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧನ ಭೀತಿಯಲ್ಲಿದ್ದ ಭೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬೆನ್ನಲ್ಲೇ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅಲ್ಲದೇ ಶರಣಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಶಾಸಕ ಭೈರತಿ ಬಸವರಾಜ್ ಅಹಮದಾಬಾದ್ ನಿಂದ ಬೆಂಗಳೂರುಗೆ ಆಗಮಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಸಿಐಡಿ ಪೊಲೀಸರು ಭೈರತಿ ಬಸವರಾಜ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಎಸಿಪಿ ಹರ್ಷಾ ಅವರ ನೇತೃತ್ವದ ತಂಡ ಭೈರತಿ ಬಸವರಾಜ್ ಅವರನ್ನು ವಶಕ್ಕೆ ಪಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೋಟಿಸ್ ನೀಡುತ್ತಿದ್ದಂತೆ ಶಾಸಕರು ತಲೆಮರೆಸಿಕೊಂಡಿದ್ದರು.

ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬೆಂಗಳೂರಿನ ಹಲಸೂರು ವ್ಯಾಪ್ತಿಯಲ್ಲಿ ರೌಡಿ ಶೀಟರ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ. ಬಿಕ್ಲು ಶಿವ ವಿರುದ್ದ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11 ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 2025 ಜುಲೈ 15 ರಂದು ರಾತ್ರಿ ಮನೆಯ ಮುಂದೆ ನಿಂತಿದ್ದ ವೇಳೆ 8ರಿಂದ 12 ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬಿಕ್ಲು ಶಿವನನ್ನು ಕೊಚ್ಚಿ ಕೊಲೆ ಮಾಡಿದ್ದರು. ಬಿಕ್ಲು ಶಿವ ತಾಯಿ ವಿಜಯಲಕ್ಷ್ಮೀ ಅವರ ಎದುರೇ ಈ ಹತ್ಯೆ ನಡೆದಿತ್ತು. ದುಷ್ಕೃತ್ಯದ ವಿಡಿಯೋಗಳು ಕೂಡಾ ಬಹಿರಂಗಗೊಂಡಿದ್ದವು.

ಶಾಸಕ ಬೈರತಿ ಬಸವರಾಜ್ ಅವರ ಕುಮ್ಮಕ್ಕಿನಿಂದಲೇ ತನ್ನ ಮಗನ್ನು ಕೊಲೆ ಮಾಡಲಾಗಿದೆ ಎಂದು ಬಿಕ್ಲು ಶಿವ ತಾಯಿ ವಿಜಯಲಕ್ಷ್ಮಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular