HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಭೂ ಆಧಾರ್’ ಯೋಜನೆಯಡಿ ಇನ್ನು ಪಹಣಿ ಜತೆಗೆ ಸ್ಕೆಚ್, ಆಕಾರ್...

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಭೂ ಆಧಾರ್’ ಯೋಜನೆಯಡಿ ಇನ್ನು ಪಹಣಿ ಜತೆಗೆ ಸ್ಕೆಚ್, ಆಕಾರ್ ಬಂದ್, ಮ್ಯುಟೇಷನ್ ಸೇರಿ ಸಮಗ್ರ ದಾಖಲೆ ಲಭ್ಯ

ಶಿವಮೊಗ್ಗ: ಇನ್ನು ಮುಂದೆ ಪಹಣಿಯೊಂದಿಗೆ ಸ್ಕೆಚ್, ಆಕಾರ್ ಬಂದ್ ಮತ್ತು ಮ್ಯುಟೇಷನ್ ಸೇರಿದಂತೆ ಸಮಗ್ರ ದಾಖಲೆಗಳು ಜನರಿಗೆ ಲಭ್ಯವಾಗುವಂತಹ ಭೂ ಆಧಾರ್ ಎಂಬ ಯೋಜನೆಗೆ ನೀಲಿನಕ್ಷೆ ಹಾಕಿಕೊಳ್ಳಲಾಗಿದೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

 ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನನ್ನ ಭೂಮಿ ಹೆಸರಿನಲ್ಲಿ ದರಖಾಸ್ತು ಜಮೀನುಗಳ ಪೋಡಿ ಅಭಿಯಾನ ಶುರು ಮಾಡಿದ್ದು, ಹಿಂದೆ ಸರ್ಕಾರದಿಂದ ರೈತರಿಗೆ ಮಂಜೂರಾಗಿರುವ ಭೂಮಿಗೆ ಪಕ್ಕಾ ದಾಖಲೆ ಇಲ್ಲದೇ, ಮಾರಾಟ ಮಾಡಲು, ಭಾಗ ಮಾಡಲು, ಬ್ಯಾಂಕ್ ಸೌಲಭ್ಯ ಪಡೆಯಲು ಆಗದೇ ಅತಂತ್ರ ಸ್ಥಿತಿಯಲ್ಲಿರುವ ರೈತರಿಗೆ ಸರ್ಕಾರವೇ ಜಮೀನಿಗೆ ಹೋಗಿ ದರಖಾಸ್ತು ಪೋಡಿ ಮಾಡಿಸುವ ಅಭಿಯಾನವನ್ನು ಕೈಗೊಂಡಿದೆ. ಈ ಯೋಜನೆಯಡಿ ವೇಗವಾಗಿ ಕೆಲಸ ಆಗುತ್ತಿದೆ. ಹಿಂದಿನ ಐದು ವರ್ಷದಲ್ಲಿ 8542 ಪೋಡಿಯಾಗಿದ್ದರೆ 2025 ರ ಜನವರಿಯಿಂದ 2026 ರ ಜನವರಿಯೊಳಗೆ 1.93 ಲಕ್ಷ ಪೋಡಿ ಮಾಡುವ ಮೂಲಕ ರೈತರ ಭೂಮಿ ಮಾಲೀಕತ್ವಕ್ಕೆ ಖಚಿತತೆ ನೀಡಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾವಿರ ದಿನ ಸಾವಿರಾರು ಕೆಲಸ: ಸರ್ಕಾರ ಈ ಸಾವಿರ ದಿನಗಳಲ್ಲಿ ಇಲಾಖೆಯ ಎಲ್ಲರ ಸಹಕಾರದಿಂದ ಸಾಕಷ್ಟು ಕೆಲಸಗಳನ್ನು ಮಾಡಿದೆ. ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ದಾಖಲಾತಿಗಳಿಗಾಗಿ ಕೋರ್ಟ್, ಕಚೇರಿ ಅಲೆಯುತ್ತಿರುವ ಜನರಿಗೆ ಪರಿಹಾರ ನೀಡಲು ಕಂದಾಯ ಇಲಾಖೆ ಬದ್ದವಾಗಿದೆ. ದಾಖಲೆ ಇಲ್ಲದೆ ವಾಸಿಸುತ್ತಿರುವವರಿಗೆ ಕಂದಾಯ ಗ್ರಾಮಗಳ ರಚನೆ ಮೂಲಕ ಅವರ ಸೂರಿಗೆ ಗ್ಯಾರಂಟಿ ನೀಡಲಾಗುತ್ತಿದೆ. ರಾಜ್ಯದಲ್ಲಿ ಸುಮಾರು 2.20 ಲಕ್ಷ ಹಕ್ಕು ಪತ್ರಗಳನ್ನು ನೀಡಲಾಗುತ್ತಿದೆ.

ತಹಶೀಲ್ದಾರ್ ಕಚೇರಿಯಲ್ಲಿ ಅವಧಿ ಮೀರಿದ 10774 ಪ್ರಕರಣಗಳು ಇದ್ದು ಪರಿಶೀಲಿಸಿ ವಿಲೇವಾರಿ ಮಾಡಿದ್ದು ಈಗ 492 ಮಾತ್ರ ಬಾಕಿ ಇವೆ. ಎಸಿ ಕಚೇರಿಯಲ್ಲಿದ್ದ 73624 ಅವಧಿ ಮೀರಿದ ಪ್ರಕರಣಗಳನ್ನು ವಿಲೇ ಮಾಡಲು ವಿಶೇಷ ಎಸಿ ಗಳನ್ನು ನೇಮಿಸಿ ಈ ಸಂಖ್ಯೆಯನ್ನು 11400 ಕ್ಕೆ ಇಳಿಸಲಾಗಿದೆ.

ಡಿಜಟಲೀಕರಣ: ಜನರಿಗೆ ದಾಖಲಾತಿಗಳು ಸುಲಭವಾಗಿ ಲಭ್ಯವಾಗಬೇಕೆಂಬ ಉದ್ದೇಶದಿಂದ ಕಂದಾಯ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳನ್ನು ಸ್ಕ್ಯಾನ್ ಮಾಡಲು ಎಲ್ಲ ತಾಲ್ಲೂಕುಗಳಿಗೆ ಕಂಪ್ಯೂಟರ್‌ಗಳು ಮತ್ತು ಸ್ಕ್ಯಾನರ್‌ಗಳನ್ನು ನೀಡಿದ್ದು ಕಾರ್ಯ ಪ್ರಗತಿಯಲ್ಲಿದೆ. ಮಾರ್ಚ್ ನಿಂದ ಕಡ್ಡಾಯವಾಗಿ ಇ-ಆಫೀಸ್ ಜಾರಿ ಮಾಡಲು ಸೂಚಿಸಿದ್ದು ಎಲ್ಲ ವಿಎಓ ಗಳಿಗೆ ಟ್ಯಾಬ್‌ಗಳನ್ನು ನೀಡಲಾಗುವುದು ಎಂದರು.

 750 ಎಡಿಎಲ್‌ಆರ್ ನೇಮಕ ಮಾಡಲು ಅಧಿಸೂಚನೆ ಹೊರಡಿಸಿದ್ದು ಕೆಲ ತಾಂತ್ರಿಕ ಕಾರಣದಿಂದ ಬಾಕಿ ಇದೆ. ಇದು ಸರಿಹೋದ ಮೇಲೆ ನೇಮಕ ಪ್ರಕ್ರಿಯೆ ಆರಂಭವಾಗುತ್ತದೆ. ಇಲಾಖೆಯಲ್ಲಿ ಸಾಕಷ್ಟು ಟೆಕ್ನಾಲಜಿ ಬಳಕೆ ಮಾಡಲಾಗುತ್ತಿದ್ದು ಸರ್ವೇ ಕಾರ್ಯಕ್ಕೆ ರೋವರ್ಸ್ ನೀಡಲಾಗಿದೆ. ಮತ್ತೆ 600 ರೋವರ್‌ಗಳಿಗೆ ಕಾರ್ಯಾದೇಶ ನೀಡಲಾಗಿದೆ. ಒಟ್ಟು 5000 ರೋವರ್ ಖರೀದಿಗೆ ಸರ್ಕಾರ ಮಂಜೂರಾತಿ ನೀಡಿದ್ದು ಪೂರೈಕೆದಾರರು ಲಭ್ಯವಾದ ನಂತರ ಖರೀದಿಸಲಾಗುವುದು. ಭೂ ಸುರಕ್ಷೆ ಯೋಜನೆಯಡಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಟಿಜಲೀಕರಣ ಮಾಡಲಾಗುತ್ತಿದೆ ಬರುವ ವರ್ಷ ಹೊಸ ಸಾಫ್ಟ್ ವೇರ್ ಸಿದ್ದಪಡಿಸುತ್ತಿದ್ದು ಆಕಾರ್ ಬಂದ್ ಶೇ. 100 ಡಿಜಿಟಲ್ ಆಗಬೇಕು. 1857 ರಿಂದ 2004 ನೇ ಇಸವಿವರೆಗಿನ ದಾಖಲೆಗಳನ್ನು ಡಿಜಿಟಲ್ ಮಾಡಲಾಗುತ್ತಿದ್ದು ಇದರಿಂದ ಹಳೆಯ ದಾಖಲಾತಿ ಪಡೆಯಲು ಸುಲಭವಾಗಲಿದೆ ಮತ್ತು ಪಾರದರ್ಶಕತೆ ಇರಲಿದ್ದು ಭೂ ಗ್ಯಾರಂಟಿ ತರಲು ಪ್ರಯತ್ನಗಳು ಸಾಗಿವೆ ಎಂದರು.

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರ ಹೆಸರಿಗೆ ಪೌತಿ ಖಾತೆ ಮಾಡಿಕೊಡುವ ಅಭಿಯಾನ ಕೈಗೊಂಡಿದ್ದು ವಾರಸುದಾರರು ಇದಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು.

ಇ-ಪೌತಿ ಖಾತೆ ಮಾಡಿಸುವ ಸಂಬAಧ ವಿಎಓ ಗಳು ವಾರಸುದಾರರನ್ನು ಗುರುತು ಮಾಡಿ ವಿವರಗಳನ್ನು ಪಡೆದು ಕ್ರಮ ಕೈಗೊಳ್ಳಬೇಕು. ಓಟಿಪಿ ಸಮಸ್ಯೆ, ಕೋರ್ಟ್ ವ್ಯಾಜ್ಯ, ಹೆಣ್ಣು ಮಕ್ಕಳಿಗೆ ಆಸ್ತಿ ಕೊಡಬೇಕಾಗುತ್ತದೆಂದು ವಾರಸುದಾರರು ಮಾಹಿತಿ ನೀಡುತ್ತಿಲ್ಲ, ಎರಡು, ಮೂರು ತಲೆಮಾರಗಳ ಪ್ರಕರಣಗಳು ಕಷ್ಟ ಎಂಬ ಸಾಮಾನ್ಯ ಕಾರಣ ನೀಡದೇ ಪ್ರತಿ ಪ್ರಕರಣದಲ್ಲಿ ನಿಖರವಾದ ಕಾರಣ ತಿಳಿದು, ವಾರಸುದಾರರ ಮನವೊಲಿಸಿ ಕ್ರಮ ವಹಿಸಬೇಕು. ಹಾಗೂ 2021 ರ ಸುತ್ತೋಲೆ ಪ್ರಕಾರ ಅಭಿಯಾನ ಮಾದರಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ದಿ.14-02-2026 ರಂದು ಹಾವೇರಿಯಲ್ಲಿ ನಡೆಯಲಿರುವ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶಕ್ಕೆ ಜಿಲ್ಲೆಯಿಂದ ಹೊಸ ಕಂದಾಯ ಗ್ರಾಮದ ಹಕ್ಕುಪತ್ರ ಪಡೆಯಲು 2558 ಫಲಾನುಭವಿಗಳು, ಇ ಪೌತಿ 5405, ದರಖಾಸ್ತು ಪೋಡಿ 1438 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಚಿವರು, ಎಲ್ಲರೂ ಸೇರಿ ಶ್ರಮವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಪ್ರೊಬೇಷನರಿ ಐಎಎಸ್ ಅಧಿಕಾರಿ ನಾಗೇಂದ್ರ ಬಾಬು, ಜಿ.ಪಂ ಉಪ ಕಾರ್ಯದರ್ಶಿ ಸುಜಾತಾ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಎಸಿಗಳು, ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಎಓಗಳು ಪಾಲ್ಗೊಂಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular