ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 2026-27 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಹಣಕಾಸು ಖಾತೆಯನ್ನು ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮಾರ್ಚ್ 6ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ದಾಖಲೆಯ 16 ಬಜೆಟ್ ಮಂಡನೆ ಮಾಡಿದ್ದು, ಮಾರ್ಚ್ ನಲ್ಲಿ ಮಂಡಿಸುವ ಬಜೆಟ್ 17ನೇ ಬಜೆಟ್ ಆಗಿರುತ್ತದೆ. ಈಗಾಗಲೇ ಬಜೆಟ್ ಪೂರ್ವಭಾವಿಯಾಗಿ ವಿವಿಧ ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ದು, ಯೋಜನೆ, ಅನುದಾನ ಹಂಚಿಕೆ ಕುರಿತಾಗಿ ಚರ್ಚೆ ನಡೆಸಿದ್ದಾರೆ.

