ಬೆಂಗಳೂರು: ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಬಗ್ಗೆ ಮಾಹಿತಿ ನೀಡಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕೆ ನಾಲ್ಕು ಸಾರಿಗೆ ನಿಗಮಗಳಿಂದ ಉಚಿತ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುವುದು. ಸ್ಮಾರ್ಟ್ ಕಾರ್ಡ್ ತೋರಿಸಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು.
ಈ ಮೂಲಕ ಮಹಿಳೆಯರು ಸಾರಿಗೆ ಬಸ್ ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಬ್ರೇಕ್ ಹಾಕಿದ್ದು, ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸಲಾಗುವುದು.

