ಬೆಂಗಳೂರು: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊಸಕೋಟೆ ಬಳಿ ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಆರು ಜನ ಮತ್ತು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಹೊಸಕೋಟೆ –ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಆರು ಜನ ಬೆಂಗಳೂರಿನ ಕೊತ್ತನೂರು ನಿವಾಸಿಗಳಾಗಿದ್ದಾರೆ. ಮೃತದೇಹಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

