ಬೆಂಗಳೂರು : 2025-26ನೇ ಸಾಲಿನ NMMS ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು (KSEAB) ಫೆಬ್ರವರಿ 12, 2026 ರಂದು ಈ ಪ್ರಕಟಣೆಯನ್ನು ಹೊರಡಿಸಿದೆ. 2025-26ನೇ ಸಾಲಿನ ರಾಷ್ಟ್ರೀಯ ಆದಾಯ ಮತ್ತು ಮೆರಿಟ್ ಆಧಾರಿತ ವಿದ್ಯಾರ್ಥಿವೇತನ (NMMS) ಪರೀಕ್ಷೆಯು ಫೆಬ್ರವರಿ 1, 2026 ರಂದು ನಡೆದಿದೆ.
ಈ ಮೊದಲು ಫೆಬ್ರವರಿ 4, 2026 ರಂದು ಕೀ ಉತ್ತರಗಳನ್ನು ಪ್ರಕಟಿಸಿ, ಫೆಬ್ರವರಿ 7 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ, ಈಗ ಪರಿಷ್ಕೃತ (Final) ಕೀ ಉತ್ತರಗಳನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಮಾಹಿತಿಗಾಗಿ https://kseab.karnataka.gov.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ತಿಳಿಸಿದೆ.




