HomeKarnatakaಅಬಕಾರಿ ಇಲಾಖೆಗೆ ಆರೋಗ್ಯಾಧಿಕಾರಿ ವರ್ಗಾವಣೆ, ಇದೆಂಥ ಸರ್ಕಾರ

ಅಬಕಾರಿ ಇಲಾಖೆಗೆ ಆರೋಗ್ಯಾಧಿಕಾರಿ ವರ್ಗಾವಣೆ, ಇದೆಂಥ ಸರ್ಕಾರ

ಕರ್ನಾಟಕದ ಕಾಂಗ್ರೆಸ್ ಸರ್ಕಾರ ವರ್ಗಾವಣೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಯೊಬ್ಬರ ವರ್ಗಾವಣೆಗೆ ಟಿಪ್ಪಣಿಯನ್ನು ಹೊರಡಿಸಿದ್ದು, ಅದು ಚರ್ಚೆಗೆ ಕಾರಣವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಡಾ.ಕೆ.ಮೋಹನ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಮಂಡ್ಯ ಜಿಲ್ಲೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರನ್ನು ಅಬಕಾರಿ ಉಪ ಆಯುಕ್ತರು, ಮೈಸೂರು ಗ್ರಾಮಾಂತರ ಜಿಲ್ಲೆ, ಮೈಸೂರು ಇಲ್ಲಿಗೆ ನಿಯೋಜಿಸಲು ಸೂಚಿಸಿದೆ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಗೆ ಟಿಪ್ಪಣಿ ಹೊರಡಿಸಿದ್ದಾರೆ.

ಆರ್.ಅಶೋಕ ಕಿಡಿ: ಈ ವರ್ಗಾವಣೆ ಟಿಪ್ಪಣಿ ಕುರಿತು ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಅಬಕಾರಿ ಇಲಾಖೆಗೆ ಆರೋಗ್ಯಾಧಿಕಾರಿ ಟ್ರಾನ್ಸ್‌ಫರ್, ಇದು ಸಿದ್ದರಾಮಯ್ಯನವರ ತುಘಲಕ್ ದರ್ಬಾರ್ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್.ಅಶೋಕ ತಮ್ಮ ಪೋಸ್ಟ್‌ನಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಸ್ವತಃ ಮುಖ್ಯಮಂತ್ರಿಗಳೇ ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಪತ್ರ ಬರೆದು ನಿರ್ದೇಶನ ನೀಡಿರುವುದು ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ, ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಗೆ ಕನ್ನಡಿ ಹಿಡಿದಿದೆ ಎಂದು ಹೇಳಿದ್ದಾರೆ.

ಗೋಕುಲಾಷ್ಟಮಿಗೂ ಇಮಾಂ ಸಾಬಿಗೂ ಏನು ಸಂಬಂಧ ಎನ್ನುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೂ, ಅಬಕಾರಿ ಇಲಾಖೆಗೂ ಏನು ಸಂಬಂಧ ಸಿಎಂ ಸಿದ್ದರಾಮಯ್ಯನವರೇ? ಇಷ್ಟಕ್ಕೂ ಒಬ್ಬ ವೈದ್ಯರನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡುವ ಅನಿವಾರ್ಯತೆ ಆದರೂ ಏನಿತ್ತು? ಎಂದು ಪ್ರಶ್ನಿಸಿದ್ದಾರೆ.

ಮೊದಲೇ ಸರ್ಕಾರಿ ಆಸ್ಪತ್ರೆಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆಯಿಂದ ಬಡ ರೋಗಿಗಳು ಪರದಾಡುತ್ತಿದ್ದಾರೆ. ಹೊಸ ನೇಮಕಾತಿಯೂ ನಡೆಯುತ್ತಿಲ್ಲ. ಅಂತಹುದರಲ್ಲಿ ಸೇವೆಯಲ್ಲಿರುವ ವೈದ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗ ಮಾಡುವ ಅನಿವಾರ್ಯತೆ, ಹಪಾಹಪಿ ಯಾಕೆ ಸಿದ್ದರಾಮಯ್ಯನವರೇ? ಎಂದು ಕೇಳಿದ್ದಾರೆ.

ಇದರ ಹಿಂದಿರುವ ನಿಜವಾದ ಉದ್ದೇಶವಾದರೂ ಏನು?. ಅದರಲ್ಲೂ ಸಹ ತಾವು ಖುದ್ದಾಗಿ ಶಿಫಾರಸ್ಸು ಮಾಡಿ ವರ್ಗಾವಣೆ ಮಾಡಿರುವ ಅಧಿಕಾರಿ ಡಾ. ಮೋಹನ್ ಅವರು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ಸಂಬಂಧಿ ಎನ್ನುವ ಮಾಹಿತಿ ಇದೆ. ಏನು ನಡೆಯುತ್ತಿದೆ ಸ್ವಾಮಿ ನಿಮ್ಮ ಕಾಂಗ್ರೆಸ್ ಸರ್ಕಾರದಲ್ಲಿ?. ಇದೇನು ಸರ್ಕಾರವೋ? ಅಥವಾ ತುಘಲಕ್ ದರ್ಬಾರೋ? ಎಂದು ಆರ್.ಅಶೋಕ ಟೀಕಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular