HomeLatest NewsBIG NEWS: ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತಕ್ಕೆ ಬಂದಿದೆ: ಶಾಸಕ ಯತ್ನಾಳ್ ಹೇಳಿಕೆ

BIG NEWS: ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತಕ್ಕೆ ಬಂದಿದೆ: ಶಾಸಕ ಯತ್ನಾಳ್ ಹೇಳಿಕೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವ ಹಂತ ತಲುಪಿದೆ ಎಂದು ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ರಾಜ್ಯ ಸರ್ಕಾರ ಪತನವಾಗುವ ಹಂತ ತಲುಪಿದೆ. ಡಿ.ಕೆ.ಶಿವಕುಮಾರ್ ಶತಾಯಗತಾಯ ಸಿಎಂ ಆಗುವುದಕ್ಕೆ ಹೊರಟಿದ್ದಾರೆ. ಸರ್ಕಾರ ಹೋದರೂ ತೊಂದರೆ ಇಲ್ಲ ಎಂಬ ಹಂತಕ್ಕೆ ಬಂದಿದ್ದಾರೆ ಎಂದರು.

2-3 ದಿನಗಳ ಹೇಳಿಕೆಯಲ್ಲಿ ಡಿ.ಕೆ.ಶಿವಕುಮಾರ್ ಗಟ್ಟಿಯಾಗಿ ಮಾತನಾಡಿದ್ದಾರೆ. ದೆಹಲಿಯಲ್ಲಿ ಗಾಳಿ ಕುಡಿಯಲು ಬಂದಿಲ್ಲ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡೆಯುತ್ತಿರುವಾಗ ರಾಜ್ಯ ಸರ್ಕಾರ ಪತನವಾದರೂ ಆಶ್ಚರ್ಯವಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾರಕಕ್ಕೇರಿದೆ. ನೇರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಸಚಿವ ಭೈರತಿ ಸುರೇಶ್ ಅವರೇ ಭಾಗಿಯಾಗಿದ್ದಾರೆ. ಸಿಎಂ ಪುತ್ರನ ಹಸ್ತಕ್ಷೇಪಗಳಿಂದಾಗಿ ಇಲಕಹೆಗಳಲ್ಲಿ ಅಧಿಕಾರಿಗಳು ಬೇಸತ್ತುಹೋಗಿದ್ದಾರೆ ಎಂದು ಗುಡುಗುದರು.

ಸಿಎಂ ಸಿದ್ದರಾಮಯ್ಯನವರು ರಾಜ್ಯದ ಸುದೀರ್ಘ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬುದು ನಿಜ. ಆದರೆ ಅತಿ ಭ್ರಷ್ಟ ಮುಖ್ಯಮಂತ್ರಿ ಎಂಬ ಹೆಸರು ಪಡೆದು ನಿವೃತ್ತಿಯಾಗುತ್ತಾರೆ. ಕುಡುಭ್ರಷ್ಟ ಎಂದು ಹೆಸರು ತೆಗೆದುಕೊಳ್ಳಬೇಡಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular