HomeEntertainmentBREAKING: ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತಕ್ಕೆ ಬಲಿ; ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದಾಗಲೇ ದುರಂತ

BREAKING: ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತಕ್ಕೆ ಬಲಿ; ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದಾಗಲೇ ದುರಂತ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಜೋ ಸೈಮನ್ ಕನ್ನಡ ಚಲನಚಿತ್ರದ ನಿರ್ದೇಶಕ ಮತ್ತು ಲೇಖಕ. ಸಹೋದರರ ಸವಾಲ್(1977), ಒಂದು ಪ್ರೇಮದ ಕಥೆ(1977), ಬಂಗಾರದ ಗುಡಿ(1976) ಮೊದಲಾದವು. ಸಾಹಸಸಿಂಹ, ನ್ಯಾಯ ಗೆದ್ದಿತು, ಪ್ರೇಮ ಜಾಲ, ರವಿ ವರ್ಮ, ಊರಿಗೆ ಉಪಕಾರಿ, ನನ್ನ ರೋಷ ನೂರು ವರುಷ ಮುಂತಾದವು ಜೋ ಸೈಮನ್ ಅವರ ಜನಪ್ರಿಯ ಸಿನಿಮಾಗಳು. 85ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಇವರು ಕೆಲಸ ಮಾಅಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಮೂಲದ ಜೋ ಸೈಮನ್, ತಮ್ಮ ಓದನ್ನು ಮಂಡ್ಯದಲ್ಲಿ ಮುಗಿಸಿದ ನಂತರ 1967 ರಲ್ಲಿ ರಗಸ್ಯ ಪೊಲೀಸ್ 115 ಮೂಲಕ ಚಲನಚಿತ್ರ ರಂಗ ಪ್ರವೇಶಿಸಿದರು. ಪ್ರಾರಂಭದಲ್ಲಿ ಅವರು. ಟಚ್ ಅಪ್ ಬಾಯ್, ಸಹಾಯಕ ಮೇಕ್ಅಪ್ ಮ್ಯಾನ್ ಮತ್ತು ಸೆಟ್ ಬಾಯ್ ಆಗಿ ಕೆಲಸ ಮಾಡಿದರು. ನಂತರ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಅವರು ಕೆ. ಎಸ್. ಆರ್. ದಾಸ್, ಆರ್.ಎನ್. ಜಯಗೋಪಾಲ್, ಕಣಗಾಲ್ ಪ್ರಭಾಕರ ಶಾಸ್ತ್ರಿ, ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಮುಂತಾದ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ.

ಅವರ ಮೊದಲ ನಿರ್ದೇಶನದ ಚಿತ್ರ ಒಂದು ಪ್ರೇಮದ ಕಥೆ, ರಜನಿಕಾಂತ್ ಮತ್ತು ಎಲ್.ವಿ.ಶಾರದಾ ಅಭಿನಯಿಸಿದ್ದಾರೆ. ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರಹಗಾರರು ಕೂಡ ಆಗಿದ್ದು, 30 ಕ್ಕೂ ಹೆಚ್ಚು ಚಲನಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular