HomeKarnatakaಹೈಕಮಾಂಡ್ ಭೇಟಿ ಬಳಿಕ ನೊಣವಿನಕೆರೆ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ!

ಹೈಕಮಾಂಡ್ ಭೇಟಿ ಬಳಿಕ ನೊಣವಿನಕೆರೆ ಮಠಕ್ಕೆ ಡಿಕೆಶಿ ದಿಢೀರ್ ಭೇಟಿ!

ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ದಿಢೀರ್ ಭೇಟಿ ನೀಡಿ ಅಚ್ಚರಿ ಮೂಡಿಸಿದರು.

ಡಿ.ಕೆ.ಶಿವಕುಮಾರ್ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಭೇಟಿ ನೀಡಿ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು.

“ನಾನು ಡಿಸಿಎಂ ಆಗಿ ಅಲ್ಲ, ಮಠದ ಒಬ್ಬ ಭಕ್ತನಾಗಿ, ಶ್ರೀಗಳ ಶಿಷ್ಯನಾಗಿ, ಅಜ್ಜನ ಒಬ್ಬ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಡಿ.ಕೆ.ಶಿವಕುಮಾರ್ ಅಜ್ಜಯ್ಯನ ಜಾತ್ರಾ ಮಹೋತ್ಸವ-2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿ, “ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬುದು ವೀರ ಗಂಗಾಧರ ಅಜ್ಜಯ್ಯನ ವಾಣಿಯಾಗಿದೆ. ಅಜ್ಜಯ್ಯನ ಮಾರ್ಗದರ್ಶನದಲ್ಲಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಈ ಪವಿತ್ರವಾದ ನಮ್ಮ ಅಜ್ಜಯ್ಯನ ಜಾತ್ರೆಯ ಧರ್ಮಸಭೆಯಲ್ಲಿ ಪಾಲ್ಗೊಂಡಿರುವುದು ನಮ್ಮೆಲ್ಲರ ಭಾಗ್ಯ” ಎಂದರು.

“233ನೇ ವರ್ಷದ ವಾರ್ಷಿಕೋತ್ಸವ ಹಾಗೂ 18ನೇ ವರ್ಷದ ಪುಣ್ಯ ಆರಾಧನೆ ನಡೆಯುತ್ತಿದ್ದು, ಈ ವೇಳೆ ಗಂಗಾಧರ ಅಜ್ಜಯ್ಯನ ಪಾದಗಳಿಗೆ ನನ್ನ ಕೋಟಿ ನಮಸ್ಕಾರಗಳು. ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ ಎಂಬ ಮಾತಿದೆ” ಎಂದು ಹೇಳಿದರು.

“ನನಗೂ ಅಜ್ಜಯ್ಯನಿಗೂ ಇರುವ ಸಂಬಂಧ ಹಾಗೂ ನಂಬಿಕೆ ಎಲ್ಲರಿಗೂ ಗೊತ್ತಿದೆ. ಅವರ ಮಾರ್ಗದರ್ಶನ ಹಾಗೂ ಶಕ್ತಿಯಿಂದಲೇ ಇಲ್ಲಿಯವರೆಗೂ ಬೆಳೆದುಕೊಂಡು ಬಂದಿದ್ದೇವೆ. ಈ ಮಠವನ್ನು ಇನ್ನೂ ಎತ್ತರಕ್ಕೆ ಬೆಳೆಸಲು ನಾವೆಲ್ಲರೂ ಕೈಜೋಡಿಸೋಣ” ಎಂದು ಕರೆ ನೀಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular