HomeKarnatakaBREAKING: ಅಧಿಕಾರಿ ವರ್ಗಾವಣೆ ಬಗ್ಗೆ ಸುಳ್ಳು ಆದೇಶ ಪ್ರತಿ ಸೃಷ್ಟಿ: ಸಿಎಂ ಸಿದ್ದರಾಮಯ್ಯ ಗರಂ: ದೂರು...

BREAKING: ಅಧಿಕಾರಿ ವರ್ಗಾವಣೆ ಬಗ್ಗೆ ಸುಳ್ಳು ಆದೇಶ ಪ್ರತಿ ಸೃಷ್ಟಿ: ಸಿಎಂ ಸಿದ್ದರಾಮಯ್ಯ ಗರಂ: ದೂರು ದಾಖಲು, ಕಾನೂನು ಕ್ರಮಕ್ಕೆ ಸೂಚನೆ

ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿ ಸೃಷ್ಟಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕೆ. ಮೋಹನ್ ಅವರನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪತ್ರ ಹರಿಬಿಟ್ಟು ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ||ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ. ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು  ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್ / ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular