ಹಾಸನ: ಫೆಬ್ರವರಿ ಕೊನೆ ಅಥವಾ ಮಾರ್ಚ್ ನಲ್ಲಿ ಇಂದಿರಾ ಕಿಟ್ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಹಾಸನದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸರ್ಕಾರದಿಂದ ಇಂದಿರಾ ಕಿಟ್ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಪಡಿತರ ಫಲಾನುಭವಿಗಳಿಗೆ ಬೇಳೆ, ಸಕ್ಕರೆ, ಅಡುಗೆ ಎಣ್ಣೆ, ಉಪ್ಪು ಒಳಗೊಂಡ ಕಿಟ್ ವಿತರಿಸಲಿದ್ದು, ಈ ಇಂದಿರಾ ಕಿಟ್ ಯೋಜನೆಯಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಹೇಳಿದ್ದಾರೆ.

