ಶಿವಮೊಗ್ಗ: ಕುಡಿದ ಮತ್ತಿನಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 12/2/26 ರ ರಾತ್ರಿ ಗಾಜನೂರಿನ ಸೊಸೈಟಿ ಬಳಿ ಶ್ರೀನಿವಾಸ(36) ಕೊಲೆ ಮಾಡಲಾಗಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಶ್ರೀನಿವಾಸ ಶಿವಮೊಗ್ಗದ ಹೊಸಮನೆ 6 ನೇ ಕ್ರಾಸ್, ಬೋವಿ ಕಾಲೋನಿ ನಿವಾಸಿಯಾಗಿದ್ದು, ಕಲ್ಲು ಎತ್ತಿ ಹಾಕಿ ಆತನ ಕೊಲೆ ಮಾಡಿದ್ದು, ಈ ಬಗ್ಗೆ ಶ್ರೀಧರ ನೀಡಿದ ದೂರಿನ ಮೇರೆಗೆ ತುಂಗಾನಗರ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕೊಲೆ ಆರೋಪಿಗಳಾದ ಕೃಷ್ಣಮೂರ್ತಿ(44), ಮಾಲತೇಶ್(21) ಅವರನ್ನು ಬಂಧಿಸಿದ್ದಾರೆ. ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಆರೋಪಿಗಳು ಕಲ್ಲು ಎತ್ತಿಹಾಕಿ ಕತ್ತಿಯಿಂದ ಚುಚ್ಚಿ ಕೊಲೆ ಮಾಡಿರುವುದು ತನಿಖೆಯಲ್ಲಿ ತಿಳಿದುಬಂದಿರುತ್ತದೆ. ತನಿಖೆ ಮುಂದುವರೆದಿದೆ.

