ಶಿವಮೊಗ್ಗ: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ, ಹಣ ದೋಚಿ ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾನಲ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಬ್ಬಳ್ಳಿ ಹುಚ್ಚಪ್ಪ ಎಂಬ ರೈತನ ಮನೆಗೆ ಹಾಡಹಗಲೇ ನುಗ್ಗಿದ ಕಳ್ಳ ಕಿಟಕಿ, ಬಾಗಿಲು ಮುರಿದು ಒಳ ನುಗ್ಗಿದ್ದಾನೆ.
50 ಸಾವಿರ ರೂಪಾಯಿ ಹಣ, ಚಿನ್ನಾಭರಣಗಳನ್ನು ಕಂದು ಎಸ್ಕೇಪ್ ಆಗಿತ್ತಿದ್ದ. ಈ ವೇಳೆ ಕಳ್ಳನನ್ನು ಹಿಡಿದ ಗ್ರಾಮಸ್ಥರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಅಲ್ಲದೇ ಕಳ್ಳನನ್ನು ಅರೆಬೆತ್ತಲುಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮೂಲಕ ಟ್ರಕ್ ನಲ್ಲಿ ಸಾಗರ ಪೊಲೀಸ್ ಠಾಣೆಗೆ ಕರೆತಂದು ಒಪ್ಪಿಸಿದ್ದಾರೆ.
ಪೊಲೀಸರ ಮುಂದೆಯೂ ಕಳ್ಳನಿಗೆ ಮನಬಂದಂತೆ ಹೊಡೆದಿದ್ದಾರೆ. ಸದ್ಯ ಕಳ್ಳನನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

