ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) 2026-27ನೇ ಸಾಲಿಗೆ ಐಟಿಐ ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿಗಾಗಿ ಒಟ್ಟು 388 ಶಿಶಿಕ್ಷು (Apprentices) ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್ಸೈಟ್ www.hescom.karnataka.gov.in ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ದಾಖಲೆಗಳೊಂದಿಗೆ “ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಕೈಗಾರಿಕಾ ತರಬೇತಿ ಕೇಂದ್ರ (ಐ.ಟಿ.ಸಿ), ಹೆಸ್ಕಾಂ, ವಿದ್ಯುತ್ ನಗರ, ಕಾರವಾರ ರಸ್ತೆ, ಹುಬ್ಬಳ್ಳಿ – 580024” ಇವರಿಗೆ ಸಲ್ಲಿಸಬೇಕು.
ಕೊನೆಯ ದಿನಾಂಕ: ಅರ್ಜಿ ಸಲ್ಲಿಸಲು 09.03.2026ರ ಸಂಜೆ 4:00 ಗಂಟೆಯೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪಿಸಬೇಕು.: ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ಅಭಿಯಂತರರನ್ನು ಅಥವಾ ದೂರವಾಣಿ ಸಂಖ್ಯೆ 0836-2956611 ಅನ್ನು ಸಂಪರ್ಕಿಸಬಹುದು.


