HomeKarnatakaಸರ್ಕಾರಿ ಶಾಲೆ ಮಕ್ಕಳಿಗೆ ಅವಿಸ್ಮರಣೀಯ ಕ್ಷಣವಾದ ಹಂಪಿ ಉತ್ಸವ: ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ...

ಸರ್ಕಾರಿ ಶಾಲೆ ಮಕ್ಕಳಿಗೆ ಅವಿಸ್ಮರಣೀಯ ಕ್ಷಣವಾದ ಹಂಪಿ ಉತ್ಸವ: ಸ್ವಂತ ಖರ್ಚಿನಲ್ಲಿ ಹೆಲಿಕಾಪ್ಟರ್ ರೈಡ್ ಮಾಡಿಸಿದ ಸಚಿವ ಜಮೀರ್ ಅಹ್ಮದ್

ಬಳ್ಳಾರಿ: ವಿಶ್ವವಿಖ್ಯಾತ ಹಂಪಿ ಉತ್ಸವ ಈ ಬಾರಿ ಸರ್ಕಾರಿ ಶಾಲೆ ಮಕ್ಕಳಿಗೆ ಅವಿಸ್ಮರಣೀಯ ಕ್ಷಣವಾಗಿದ್ದು, ಅವರ ಸಂಭ್ರಮ ಹೆಚ್ಚಿಸಿದೆ.

ಹಂಪಿ ಉತ್ಸವದ ಹಿನ್ನೆಲೆಯಲ್ಲಿ ಕಮಲಾಪುರದ ಮಯೂರ ಹೋಟೆಲ್ ಆವರಣದಲ್ಲಿ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ನೋಡಲು ಸುತ್ತಮುತ್ತಲಿನ ಸರ್ಕಾರಿ ಶಾಲೆಗಳ ಮಕ್ಕಳು ಆಗಮಿಸಿದ್ದಾರೆ.

ದೂರದಿಂದಲೇ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ ಸರ್ಕಾರಿ ಶಾಲೆ ಮಕ್ಕಳಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಹೆಲಿಕಾಫ್ಟರ್ ರೈಡ್ ಮಾಡಿಸಿದ್ದಾರೆ. ಹೆಲಿಕಾಪ್ಟರ್ ರೈಡ್ ಕಾರ್ಯಕ್ರಮದ ಸ್ಥಳದಲ್ಲಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸರ್ಕಾರಿ ಶಾಲಾ ಮಕ್ಕಳ ಬಳಿಗೆ ತೆರಳಿ ನೀವು ಹೆಲಿಕಾಪ್ಟರ್ ಹತ್ತ ಬೇಕಾ ಎಂದು ಪ್ರಶ್ನಿಸಿದ್ದಾರೆ. ಖುಷಿಯಿಂದ ಮಕ್ಕಳು ಹೌದು ಸಾರ್ ಎಂದು ಹೇಳಿದ್ದು, ಮಕ್ಕಳ ಆಸೆಯನ್ನು ಗಮನಿಸಿದ ಸಚಿವರು ಕೂಡಲೇ ತಮ್ಮ ಸ್ವಂತ ಖರ್ಚಿನಲ್ಲಿ 60ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಹೆಲಿಕ್ಯಾಪ್ಟರ್ ರೈಡ್ ವ್ಯವಸ್ಥೆ ಮಾಡಿದ್ದಾರೆ. ಹೆಲಿಕಾಪ್ಟರ್ ರೈಡ್ ಮಾಡಿದ ಮಕ್ಕಳ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular