ಬೆಂಗಳೂರು: ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಇಲಾಖೆ ಕಾರ್ಯದರ್ಶಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್ ಪತ್ರ ಬರೆದಿದ್ದಾರೆ.
ಕ್ಯಾಲಿಫೋರ್ನಿಯಾದ ಬರ್ಕಲಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ನಾಪತ್ತೆಯಾಗಿದ್ದು, ವಿದ್ಯಾರ್ಥಿ ಕಾಣೆಯಾದ ಬಗ್ಗೆ ಅಲ್ಲಿ ದೂರು ದಾಖಲಾಗಿದೆ. ಅಲ್ಲಿನ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಸಾಕೇತ್ ಗಾಗಿ ಹುಡುಕುವ ಕೆಲಸ ಮಾಡಬೇಕು ಎಂದು ಅಲ್ಲಿನ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಪತ್ರ ಬರೆದಿದ್ದಾರೆ.
ಸಾಕೇತ್ ನಾಪತ್ತೆಯಾದ ಬಗ್ಗೆ ಆತನ ಕುಟುಂಬಕ್ಕೆ ಅಗತ್ಯ ನೆರವು ನೀಡಬೇಕೆಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿಗೆ ಸಿಎಸ್ ಶಾಲಿನಿ ರಜನೀಶ್ ಪತ್ರ ಬರೆದು ಮನವಿ ಮಾಡಿದ್ದಾರೆ.

