HomeLatest NewsT20 World Cup 2026: ಮಾರ್ಕ್ರಮ್ ಅಬ್ಬರ; ಕಿವೀಸ್ ಬಗ್ಗುಬಡಿದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಹರಿಣಗಳು

T20 World Cup 2026: ಮಾರ್ಕ್ರಮ್ ಅಬ್ಬರ; ಕಿವೀಸ್ ಬಗ್ಗುಬಡಿದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಹರಿಣಗಳು

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 24ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಕಂಡು ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿ ನ್ಯೂಜಿಲೆಂಡ್‌ಗೆ 176 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಏಡನ್ ಮಾರ್ಕ್ರಮ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 17.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು.

ನ್ಯೂಜಿಲೆಂಡ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಟಿಮ್ ಸೈಫರ್ಟ್ 13 ರನ್ ಹಾಗೂ ಫಿನ್ ಅಲೆನ್ 31 ರನ್ ಕಲೆಹಾಕಿದರು. ಇನ್ನುಳಿದಂತೆ ರಚಿನ್ ರವೀಂದ್ರ 13, ಗ್ಲೆನ್ ಫಿಲಿಪ್ಸ್ 1, ಮಾರ್ಕ್ ಕ್ಯಾಂಪ್‌ಮನ್ 26 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 48 ರನ್ ಬಾರಿಸಿದರು. ಡೇರಿಲ್ ಮಿಚೆಲ್ 32, ಮಿಚೆಲ್ ಸ್ಯಾಂಟ್ನರ್ 4, ಜೇಮ್ಸ್ ನೀಶಮ್ ಅಜೇಯ 23 ಹಾಗೂ ಮ್ಯಾಟ್ ಹೆನ್ರಿ ಅಜೇಯ 9 ರನ್ ಬಾರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಆಫ್ರಿಕಾ ಪರ ಮಾರ್ಕೊ ಯಾನ್ಸೆನ್ ನಾಲ್ಕು ವಿಕೆಟ್, ಲುಂಗಿ ಎನ್‌ಗಿಡಿ, ಕೇಶವ್ ಮಹಾರಾಜ್ ಹಾಗೂ ಕಾರ್ಬಿನ್ ಬಾಷ್ ತಲಾ ಒಂದೊಂದು ವಿಕೆಟ್ ಪಡೆದರು.

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟನ್ ಡಿ ಕಾಕ್ 20 ರನ್ ಗಳಿಸಿದರೆ, ಗೆಲುವಿನವರೆಗೂ ಅಬ್ಬರಿಸಿದ ನಾಯಕ ಏಡನ್ ಮಾರ್ಕ್ರಮ್ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 86 ರನ್ ಬಾರಿಸಿದರು. ಇನ್ನುಳಿದಂತೆ ರಯಾನ್ ರಿಕೆಲ್ಟನ್ 21, ಡಿವಾಲ್ಡ್ ಬ್ರೆವಿಸ್ 21 ಹಾಗೂ ಡೇವಿಡ್ ಮಿಲ್ಲರ್ ಅಜೇಯ 24 ರನ್ ಬಾರಿಸಿದರು.

ಲಾಕಿ ಫರ್ಗ್ಯೂಸನ್, ಜೇಮ್ಸ್ ನೀಶಮ್ ಹಾಗೂ ರಚಿನ್ ರವೀಂದ್ರ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular