HomeKarnatakaBREAKING: ತಡರಾತ್ರಿ ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ: ಫರ್ನಿಚರ್ ಮಳಿಗೆ ಸುಟ್ಟು ಕರಕಲು

BREAKING: ತಡರಾತ್ರಿ ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ: ಫರ್ನಿಚರ್ ಮಳಿಗೆ ಸುಟ್ಟು ಕರಕಲು

ಬೆಂಗಳೂರು: ಅಗ್ನಿ ಅವಘಡದಿಂದ ಫರ್ನಿಚರ್ ಮಳಿಗೆ ಸುಟ್ಟು ಕರಕಲಾದ ಘಟನೆ ತಡರಾತ್ರಿ ಬೆಂಗಳೂರಿನ ಮೂಡಲಪಾಳ್ಯ ಕೆನರಾ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.

ರಾತ್ರಿ 12 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಮುರುಳಿ ಎಂಬುವರಿಗೆ ಸೇರಿದ ಫರ್ನಿಚರ್ ಮಳಿಗೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಫರ್ನಿಚರ್ ಗಳು ಬೆಂಕಿಗೆ ಆಹುತಿಯಾಗಿವೆ. ಮೂಡಲಪಾಳ್ಯ ಕೆನರಾ ಬ್ಯಾಂಕ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳಿಗೆ ಎದುರು ಇದ್ದ ಎರಡು ಮರಗಳಿಗೂ ಬೆಂಕಿ ಹೊತ್ತಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular