ಬೆಂಗಳೂರು: ಸರ್ಕಾರಿ ನೌಕರರ ಮಾದರಿಯಲ್ಲೇ ಕೆಎಸ್ಆರ್ಟಿಸಿ ನೌಕರರು ಕೂಡ ಪ್ರತಿ ತಿಂಗಳ ಮೊದಲ ಶನಿವಾರ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ದಿನಗಳಂದು ಸ್ವಯಂ ಪ್ರೇರಿತವಾಗಿ ಖಾದಿ ಉಡುಪು ಧರಿಸುವಂತೆ ಆದೇಶಿಸಲಾಗಿದೆ.
ಸಾರ್ವಜನಿಕ ಸೇವೆಯನ್ನು ಸ್ವಾತಂತ್ರ್ಯ ಹೋರಾಟದೊಂದಿಗೆ ಮರುಜೋಡಿಸುವ ಉದ್ದೇಶದೊಂದಿಗೆ ಸರ್ಕಾರ ಸರ್ಕಾರಿ, ಅನುದಾನಿತ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆ ಮತ್ತು ವಿಶ್ವವಿದ್ಯಾಲಯ ನೌಕರರು, ಅಧಿಕಾರಿಗಳಿಗೆ ಈ ಹಿಂದೆ ಸೂಚನೆ ನೀಡಿದ್ದು, ಇದನ್ನು ಕೆಎಸ್ಆರ್ಟಿಸಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಸಮವಸ್ತ್ರ ಧರಿಸುವವರನ್ನು ಹೊರತುಪಡಿಸಿ ಉಳಿದ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗದಿತ ದಿನಗಳಂದು ಸ್ವಯಂ ಪ್ರೇರಿತವಾಗಿ ಖಾದಿ ಉಡುಪು ಧರಿಸಬೇಕು ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ.

