ಬೆಂಗಳೂರು: ಕಾಶಿಯಾತ್ರೆ ಮಾದರಿಯಲ್ಲಿಯೇ ವೈಷ್ಣೋದೇವಿ ಯಾತ್ರೆಗೂ ಸಹಾಯಧನ ನೀಡಲು ರಾಜ್ಯ ಮುಜರಾಯಿ ಇಲಾಖೆ ಚಿಂತನೆ ನಡೆಸಿದೆ.
ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ವೈಷ್ಣೋದೇವಿ ದೇವಾಲಯಕ್ಕೆ ತೆರಳುವ ರಾಜ್ಯದ ಯಾತ್ರಾರ್ಥಿಗಳಿಗೆ ಸಹಾಯಧನವನ್ನು ನೀಡುವ ಯೋಜನೆ ಜಾರಿಗೆ ಉದ್ದೇಶಿಸಲಾಗಿದೆ. ಮಾನಸ ಸರೋವರ ಯಾತ್ರೆಯ ರೀತಿಯಲ್ಲಿ ವೈಷ್ಣೋದೇವಿ ಯಾತ್ರೆಗೆ ಸಹಾಯಧನ ನೀಡಲಾಗುವುದು.
ಯಾತ್ರಾರ್ಥಿಗಳು ಸಹಾಯಧನ ಪಡೆಯಲು ಯಾತ್ರೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ 5000 ರೂ. ನೀಡಲಾಗುವುದು. ಸಹಾಯಧನ ಪಡೆಯವುದಕ್ಕಾಗಿ ಮುಜರಾಯಿ ಇಲಾಖೆ ವತಿಯಿಂದ ಮಾರ್ಗಸೂಚಿ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅನುಮತಿ ದೊರೆತ ಕೂಡಲೇ ಯೋಜನೆಗೆ ಚಾಲನೆ ಸಿಗಲಿದೆ ಎಂದು ಹೇಳಲಾಗಿದೆ.

