HomeKarnatakaಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಅರೆಸ್ಟ್: 5 ಯುವತಿಯರ ರಕ್ಷಣೆ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಅರೆಸ್ಟ್: 5 ಯುವತಿಯರ ರಕ್ಷಣೆ

ಬೀದರ್: ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಐವರು ಯುವತಿಯರನ್ನು ರಕ್ಷಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೀದರ್ ನ ಶಿವನಗರ ಸಿಗ್ನಲ್ ಸಮೀಪ ಲೋಟಸ್ ಸ್ಪಾ ಮೇಲೆ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ವೇಶ್ಯಾವಾಟಿಕೆಗೆ ದೂಡಲಾಗಿದ್ದ ಅನ್ಯರಾಜ್ಯಗಳ ಐವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಮಹಾರಾಷ್ಟ್ರದ ಇಬ್ಬರು, ಮಧ್ಯಪ್ರದೇಶ, ಅಸ್ಸಾಂ, ಹರಿಯಾಣದ ತಲಾ ಒಬ್ಬ ಯುವತಿಯನ್ನು ರಕ್ಷಣೆ ಮಾಡಲಾಗಿದೆ.

ದಾಳಿಯ ವೇಳೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಬೆಳಮಗಿಯ ಕರಣ್ ಮತ್ತು ಕಲಬುರಗಿ ತಾಲೂಕಿನ ಕಾಳಗಿಯ ಸಂದೀಪ್ ಎಂಬವರನ್ನು ಬಂಧಿಸಲಾಗಿದೆ. ಕರಣ್ ಹೆಸರಿನಲ್ಲಿ ಸ್ಪಾ ನೋಂದಣಿ ಮಾಡಿಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಬೇರೆ ರಾಜ್ಯದ ಯುವತಿಯರಿಗೆ ಆಮಿಷವೊಡ್ಡಿ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular