HomeInternationalಪಾಕ್ ಬಗ್ಗುಬಡಿಯಲು ಸೂರ್ಯ ಪಡೆ ಸಜ್ಜು: ಕೊಲಂಬೊದಲ್ಲಿ ಇಂದು ಭಾರತ- ಪಾಕಿಸ್ತಾನ ಹೈವೋಲ್ಟೇಜ್ ಟಿ20 ಪಂದ್ಯ

ಪಾಕ್ ಬಗ್ಗುಬಡಿಯಲು ಸೂರ್ಯ ಪಡೆ ಸಜ್ಜು: ಕೊಲಂಬೊದಲ್ಲಿ ಇಂದು ಭಾರತ- ಪಾಕಿಸ್ತಾನ ಹೈವೋಲ್ಟೇಜ್ ಟಿ20 ಪಂದ್ಯ

ಕೊಲಂಬೊ: ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ ಕೊಲಂಬೊದಲ್ಲಿ ಟಿ20 ವಿಶ್ವಕಪ್ ನ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ. ಉಭಯ ದೇಶಗಳು ಪ್ರಾಬಲ್ಯ ಸಾಧಿಸಲು ಕಾರ್ಯತಂತ್ರ ರೂಪಿಸಿವೆ. ಪಂದ್ಯ ಬಹಿಷ್ಕರಿಸುವ ನಿರ್ಧಾರದಿಂದ ಹಿಂದೆ ಸರಿದ ಪಾಕಿಸ್ತಾನ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯಲು ಒಪ್ಪಿಕೊಂಡಿದೆ.

ಭಾರತಕ್ಕೆ ಮಧ್ಯಮ ಕ್ರಮಾಂಕದ ಸ್ಥಿರತೆ ಮತ್ತು ಅಭಿಷೇಕ್ ಶರ್ಮಾ ಅವರ ಲಭ್ಯತೆ ಅಗತ್ಯವಿದೆ. ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದ ಅಭಿಷೇಕ್ ಶರ್ಮಾ ಪೂರ್ಣವಾಗಿ ಫಿಟ್ ಆಗಿದ್ದು ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಅವರು ಲಭ್ಯವಿಲ್ಲದಿದ್ದರೆ ಸಂಜು ಸ್ಯಾಮ್ಸನ್ ಅವರನ್ನು ಮುಂದುವರೆಸಲಾಗುವುದು. ವಾಷಿಂಗ್ಟನ್ ಸುಂದರ್ ಅವರನ್ನು ಇಶಾನ್ ಕಿಶನ್ ಜೊತೆ ಆರಂಭಿಕರಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರೇಮದಾಸ ಕ್ರೀಡಾಂಗಣದ ನಿಧಾನ ಗತಿಯ ಪಿಚ್ ನಲ್ಲಿ ವಾಷಿಂಗ್ಟನ್ ಮೋಡಿ ಮಾಡುವ ಸಾಧ್ಯತೆ ಇದೆ. ಟಿ20 ಪಂದ್ಯಗಳಲ್ಲಿ ಒಟ್ಟು 16 ಬಾರಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, 13 ಬಾರಿ ಭಾರತ ಜಯಗಳಿಸಿದೆ. ಪಾಕಿಸ್ತಾನ ಮೂರು ಸಲ ಜಯಗಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀಲಂಕಾ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾನುವಾರ ಸಂಜೆ ಕೊಲಂಬೋ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular