HomeLatest Newsಯಾರೂ ಸ್ಟೇಟ್​ಮೆಂಟ್ ಕೊಡಬೇಡಿ ಎಂದು ಖರ್ಗೆ 4 ಬಾರಿ ಹೇಳಿದ್ರು; ಆದ್ರೂ ಹೇಳಿಕೆ ಕೊಡ್ತಿರುವ ಯತೀಂದ್ರನೇ...

ಯಾರೂ ಸ್ಟೇಟ್​ಮೆಂಟ್ ಕೊಡಬೇಡಿ ಎಂದು ಖರ್ಗೆ 4 ಬಾರಿ ಹೇಳಿದ್ರು; ಆದ್ರೂ ಹೇಳಿಕೆ ಕೊಡ್ತಿರುವ ಯತೀಂದ್ರನೇ ನಮ್ಮ ಹೈಕಮಾಂಡ್: ಶಾಸಕ ಗಾಣಿಗ ರವಿ ವ್ಯಂಗ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾರೂ ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದರೂ ಕಾಂಗ್ರೆಸ್ ಶಾಸಕರ ಬಣ ರಾಜಕೀಯ ಮುಂದುವರೆದಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರುವ ಶಾಸಕ ಗಾಣಿಗ ರವಿ, ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಸಿದ್ದರಾಮಯ್ಯ ಅವರೇ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ನಮಗೆ ಅವರೇ ಹೈಕಮಾಂಡ್ ಎಂದು ವ್ಯಂಗ್ಯವಾಡಿದರು.

ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು, ಆದ್ರೆ ಹೈಕಮಾಂಡ್​ಗೆ‌ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯತೀಂದ್ರ ನಮ್ಮ ಹೈಕಮಾಂಡ್ ಅಂತಾ ಡಿಸಿಎಂ ಡಿ.ಕೆ. ಶಿವಕುಮಾರ್​​ ಅವರೇ ಹೇಳಿದ್ದಾರೆ. ಹೀಗಾಗಿ ನಾನೂ ಅದನ್ನೇ ಹೇಳುತ್ತೇನೆ, ಯತೀಂದ್ರ ನಮ್ಮ ಹೈಕಮಾಂಡ್ ಅನ್ನೋದನ್ನ ನೂರಕ್ಕೆ ನೂರರಷ್ಟು ಒಪ್ಪಿಕೊಳ್ತೇವೆ. ಯಾರೂ ಸ್ಟೇಟ್​ಮೆಂಟ್ ಕೊಡಬೇಡಿ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ಕು ಬಾರಿ ಹೇಳಿದ್ರು. ಆದ್ರೂ ಸ್ಟೇಟ್​ಮೆಂಟ್ ಕೊಡ್ತಿದ್ದಾರೆ ಅಂದ್ರೆ‌ ಅವರೇ ಸುಪ್ರೀಂ. ಖರ್ಗೆಗಿಂತ ಜಾಸ್ತಿನಾ, ಡಿ.ಕೆ.ಶಿವಕುಮಾರ್ ಗಿಂತ ಕಡಿಮೆನಾ ಅಂತಾ ಹೇಳಲು ಆಗಲ್ಲ. ಬೇಡ ಅಂದ್ರೂ ಮಾತನಾಡುತ್ತಿದ್ದಾರೆ ಅಂದ್ರೆ ಪವರ್​ಫುಲ್ ಮ್ಯಾನ್ ಎಂದು ಹೇಳುವ ಮೂಲಕ ಪರೋಕ್ಷವಾಗಿ ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ಸಿಎಂ ಆಗಲೇಬೇಕು ಎಂದಿರುವ ಗಾಣಿಗ ರವಿ, ಡಿಕೆಶಿ, ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಡಿ.ಕೆ.ಶಿವಕುಮಾರ್​ಗೆ ರಾಜಕೀಯ ತಂತ್ರಗಾರಿಕೆ, ‌ಚಾಣಾಕ್ಷತನ ಇದೆ. ಯಾವಾಗ ಯಾವ ಪಾನ್ ಮೂವ್​ ಮಾಡಿದ್ರೆ ಗೇಮ್ ಗೆಲ್ಲಬಹುದೆಂದು ಗೊತ್ತಿದೆ. ಬುದ್ಧಿವಂತಿಕೆ ಇರುವುದಕ್ಕೆ ಸೈಲೆಂಟಾಗಿ ಕಾಯಿನ್ ಮೂವ್ ಮಾಡ್ತಿದ್ದಾರೆ ಎಂದರು.

ರಾಜಕಾರಣ ಅಂದಮೇಲೆ ಆಟ ಇರಲೇಬೇಕು, ಆಟ ಬಿಡಲು ಆಗಲ್ಲ. ನಮ್ಮದು ಐರ್ಲೆಂಡ್ ಟೀಂ ಅಲ್ಲ, ಬಲಿಷ್ಠ ಭಾರತ ಟೀಂ. ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಡಿ.ಕೆ.ಶಿವಕುಮಾರ್​ಗೆ ಇದ್ದು, ಪ್ರಶ್ನೆಗಳಿಗೆ ಅತೀ ಶೀಘ್ರದಲ್ಲೇ ಉತ್ತರ ಬರಲಿದೆ ಎಂದಿದ್ದಾರೆ.

ನಾಯಕತ್ವ ಗೊಂದಲದ ನಡುವೆ ಎಐಸಿಸಿ ಅಧ್ಯಕ್ಷ ಖರ್ಗೆ ನಾವೆಲ್ಲಾ ಜೊತೆಯಾಗಿ, ಒಗ್ಗಟ್ಟಾಗಿ ಹೋಗಬೇಕು ಎಂದು ಪಾಠ ಮಾಡಿದ್ದರು. ಆದರೂ ರಾಜ್ಯ ಕಾಂಗ್ರೆಸ್​​ ನಾಯಕರು ಹೈಕಮಾಂಡ್​​ ಸೂಚನೆಯನ್ನೂ ಮೀರಿ ಮಾತಾಡುತ್ತಿದ್ದಾರೆ. ಇದು ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಮುಂದುವರೆದಿರುವುದಕ್ಕೆ ಸಾಕ್ಷಿಯಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular