ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಇಂದು ( ಫೆಬ್ರವರಿ 15 ) ಐಸಿಸಿ ಟಿ ಟ್ವೆಂಟಿ ವಿಶ್ವಕಪ್ 2026ರ ಗ್ರೂಪ್ ಹಂತದ 27ನೇ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆರಿಸಿಕೊಂಡು ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ತಲಾ ಎರಡು ಪಂದ್ಯಗಳನ್ನಾಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳು ಎರಡರಲ್ಲೂ ಗೆದ್ದು ತಲಾ ನಾಲ್ಕು ಅಂಕಗಳೊಂದಿಗೆ ಎ ಗುಂಪಿನ ಅಂಕಪಟ್ಟಿಯಲ್ಲಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನದಲ್ಲಿವೆ. ಇನ್ನು ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಜತೆಗೆ ಸೂಪರ್ 8 ಸುತ್ತಿನ ಅರ್ಹತೆಯನ್ನು ಸರಾಗ ಮಾಡಿಕೊಳ್ಳಲಿದೆ. ಹೀಗಾಗಿ ಈ ಪಂದ್ಯ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.
ಭಾರತದ ಆಡುವ ಬಳಗ: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್‌ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಮ್ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.
ಪಾಕಿಸ್ತಾನ ಆಡುವ ಬಳಗ: ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಸಲ್ಮಾನ್ ಅಘಾ (ನಾಯಕ), ಬಾಬರ್ ಅಜಮ್, ಮೊಹಮ್ಮದ್ ನವಾಜ್, ಶದಾಬ್ ಖಾನ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್ (ವಿಕೆಟ್‌ಕೀಪರ್), ಶಹೀನ್ ಅಫ್ರಿದಿ, ಅಬ್ರಾರ್ ಅಹ್ಮದ್, ಉಸ್ಮಾನ್ ತಾರಿಕ್.

