ಬೆಂಗಳೂರು: ಮೂರು ವರ್ಷದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 59 ವರ್ಷದ ವ್ಯಕ್ತಿ ಮೂರು ವರ್ಷದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಈ ಬಗ್ಗೆ ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಹಾಗೂ ಓಡಿಶಾ ಮೂಲದ ಬಾಲಕಿ ಅಕ್ಕಪಕ್ಕದ ಮನೆಯವರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

